ಬೆಂಗಳೂರಿನ ಮ್ಯೂಸಿಯಂ ರಸ್ತೆಯಲ್ಲಿ ಅಗ್ನಿ ಅವಘಡ: ತಪ್ಪಿದ ಭಾರೀ ಅನಾಹುತ
ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ವ್ಯಾಪ್ತಿಯ ಮ್ಯೂಸಿಯಂ ರಸ್ತೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಕಟ್ಟಡ ಒಂದರ ಎಡನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಆದರೆ ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಅಗ್ನಿಶಾಮಕ ವಾಹನ ದೌಡಾಯಿಸಿದ್ದು, ಬೆಂಕಿ ನಂದಿಸಿದ್ದಾರೆ.
ಬೆಂಗಳೂರು, ಜೂನ್ 20: ನಗರದ ಮ್ಯೂಸಿಯಂ ರಸ್ತೆಯ ಕಟ್ಟಡದ ಎಡನೇ ಮಹಡಿಯಲ್ಲಿ ಅಗ್ನಿ ಅವಘಡ (Fire) ಸಂಭವಿಸಿದೆ. ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಎರಡು ಅಗ್ನಿಶಾಮಕ ವಾಹನಗಳು ದೌಡಾಯಿಸಿದ್ದು, ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ. ಆದರೆ ಅಗ್ನಿ ಅವಘಡಕ್ಕೆ ನಿಖರ ಕಾರಣ ಏನು ಎಂದು ತಿಳಿದುಬಂದಿಲ್ಲ. ಇತ್ತೀಚೆಗೆ ಗುಜರಾತ್ನಲ್ಲಿ ಸಂಭವಿಸಿದ್ದ ಅಗ್ನಿದುರಂತ ಹಿನ್ನಲ್ಲೆ ಬೆಂಗಳೂರಿನ ಮಾಲ್, ಗೇಮಿಂಗ್ ಜೋನ್ಗಳಲ್ಲಿ ಕಟ್ಟೆಚ್ಚರ ವಹಿಸಲಾಗಿತ್ತು. ಮಾಲ್, ಗೇಮಿಂಗ್ ಜೋನ್ಗಳಲ್ಲಿ ಕಟ್ಟೆಚ್ಚರ ವಹಿಸಿವಂತೆ ಡಿಸಿಎಂ ಡಿ.ಕೆ. ಶಿವಕುಮಾರ್ ಸೂಚನೆ ನೀಡಿದ್ದರು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.