Video: ಲಂಡನ್: ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ವಿಮಾನ ಪತನ

ಲಂಡನ್​ನ ಸೌತ್​ಎಂಡ್ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಸಣ್ಣ ವಿಮಾನವೊಂದು ಪತನಗೊಂಡಿರುವ ಮಾಹಿತಿ ಲಭ್ಯವಾಗಿದೆ. ವಿಮಾನಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಸ್ಥಳದಿಂದ ಕಪ್ಪು ಹೊಗೆ ಮೇಲೇರುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಇಲ್ಲಿಯವರೆಗೆ ಯಾವುದೇ ಸಾವುನೋವುಗಳ ವರದಿಯಾಗಿಲ್ಲ. ಸ್ಥಳೀಯ ಸಮಯ ಸಂಜೆ 4 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಅಪಘಾತಕ್ಕೀಡಾದ ವಿಮಾನವು ಬೀಚ್ ಬಿ200 ಸೂಪರ್ ಕಿಂಗ್ ಏರ್ ಆಗಿದ್ದು, ಇದು ಅವಳಿ ಎಂಜಿನ್ ಹೊಂದಿರುವ ಟರ್ಬೊಪ್ರೊಪ್ ಜೆಟ್ ಆಗಿದ್ದು, ನೆದರ್‌ಲ್ಯಾಂಡ್ಸ್‌ನ ಲೆಲಿಸ್ಟಾಡ್‌ಗೆ ತೆರಳುತ್ತಿತ್ತು.

ಲಂಡನ್, ಜುಲೈ 14: ಲಂಡನ್​ನ ಸೌತ್​ಎಂಡ್ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಸಣ್ಣ ವಿಮಾನವೊಂದು ಪತನಗೊಂಡಿರುವ ಮಾಹಿತಿ ಲಭ್ಯವಾಗಿದೆ. ವಿಮಾನಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಸ್ಥಳದಿಂದ ಕಪ್ಪು ಹೊಗೆ ಮೇಲೇರುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಇಲ್ಲಿಯವರೆಗೆ ಯಾವುದೇ ಸಾವುನೋವುಗಳ ವರದಿಯಾಗಿಲ್ಲ. ಸ್ಥಳೀಯ ಸಮಯ ಸಂಜೆ 4 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಅಪಘಾತಕ್ಕೀಡಾದ ವಿಮಾನವು ಬೀಚ್ ಬಿ200 ಸೂಪರ್ ಕಿಂಗ್ ಏರ್ ಆಗಿದ್ದು, ಇದು ಡ್ಯುಯಲ್  ಎಂಜಿನ್ ಹೊಂದಿರುವ ಟರ್ಬೊಪ್ರೊಪ್ ಜೆಟ್ ಆಗಿದ್ದು, ನೆದರ್‌ಲ್ಯಾಂಡ್ಸ್‌ನ ಲೆಲಿಸ್ಟಾಡ್‌ಗೆ ತೆರಳುತ್ತಿತ್ತು.ವಿಮಾನದಲ್ಲಿ ಎಷ್ಟು ಜನರಿದ್ದರು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಇತ್ತೀಚೆಗಷ್ಟೇ ಗುಜರಾತ್​ನ ಅಹಮದಾಬಾದ್​ನಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ 270 ಮಂದಿ ಪ್ರಾಣ ಕಳೆದುಕೊಂಡಿದ್ದರು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Published On - 9:11 am, Mon, 14 July 25

ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
Loading...
Unable to load recommendations.
Follow Us