ಬೆಳಗಾವಿ ವಕೀಲರ ಸಮಾವೇಶ ನೋಡಿದ ಬಳಿಕ ಸಿಎಂ ಸಭೆ ಕರೆದಿದ್ದಾರೆ: ಸ್ವಾಮೀಜಿ

|

Updated on: Oct 18, 2024 | 1:02 PM

ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಪಂಚಮಸಾಲಿ ಸಮುದಾಯವು 2ಎ ಮೀಸಲಾತಿಗಾಗಿ ಉಗ್ರ ಹೋರಾಟ ನಡೆಸಿದೆ. ಸಿಎಂ ಕರೆದಿರುವ ಇವತ್ತಿನ ಸಭೆ ಯಶಕಾಣುವ ವಿಶ್ವಾಸ ವ್ಯಕ್ತಪಡಿಸಿದ ಶ್ರೀಗಳು ಎಲ್ಲ ಲಿಂಗಾಯತರನ್ನು ಕೇಂದ್ರ ಸರ್ಕಾರದ ಒಬಿಸಿ ಮೀಸಲಾತಿ ಪಟ್ಟಿಗೆ ಸೇರಿಸಬೇಕೆಂದು ಹೇಳಿದರು.

ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ವಿಷಯಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಸಭೆಯೊಂದನ್ನು ನಡೆಸಲಿದ್ದು ಅದರಲ್ಲಿ ಪಾಲ್ಗೊಳ್ಳಲು ಕೂಡಲಸಂಗದಮದ ಮಠಾಧಿಪತಿ ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅಗಮಿಸಿದ್ದಾರೆ. ವಿಷಯ ಬಹಳ ವರ್ಷಗಳಿಂದ ನೆನೆಗುದಿಗೆ ಬಿದ್ದಿದೆ, ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದು ಒಂದೂವರೆ ವರ್ಷಗಳ ಬಳಿಕ ಮೊದಲ ಆಡಳಿತಾತ್ಮಕ ಸಭೆಯನ್ನು ಕರೆದಿದೆ, ಪಂಚಮಸಾಲಿ ಸಮಾಜಕ್ಕೆ ಉದ್ಯೋಗ ಮತ್ತು ಶಿಕ್ಷಣದಲ್ಲಿ 2ಎ ಮೀಸಲಾತಿಯನ್ನು ಕಲ್ಪಿಸಬೇಕೆಂದು ಮತ್ತೊಮ್ಮೆ ಮುಖ್ಯಮಂತ್ರಿಯವರನ್ನು ಆಗ್ರಹಿಸಲಿದ್ದೇವೆ ಎಂದು ನಮ್ಮ ವರದಿಗಾರನೊಂದಿಗೆ ಮಾತಾಡಿದ ಸ್ವಾಮೀಜಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಮತ್ತೆ ಮುನ್ನಲೆಗೆ ಪಂಚಮಸಾಲಿ 2ಎ ಮೀಸಲಾತಿ ಕಿಚ್ಚು: ಸಿಎಂ ಜೊತೆ ಸಮುದಾಯದ ಮುಖಂಡರ ಸಭೆ

Follow us on