ಸಂಪತ್ತಿಗೆ ಸವಾಲ್​: ಮೊದ್ಲು ನಿನ್ನ ಸೋದರನ ಲೆಕ್ಕ ಕೊಡು ಕುಮಾರಸ್ವಾಮಿ ಎಂದ ಡಿಕೆ ಶಿವಕುಮಾರ್​

|

Updated on: Aug 05, 2024 | 12:26 PM

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಮತ್ತು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಮಧ್ಯೆ ವಾಗ್ಯುದ್ಧ ಜೋರಾಗಿದೆ. ಡಿಕೆ ಶಿವಕುಮಾರ್ ಅಕ್ರಮವಾಗಿ ಆಸ್ತಿ ಗಳಿಕೆ ಮಾಡಿದ್ದಾರೆ ಎಂದು ಹೆಚ್​ಡಿ ಕುಮಾರಸ್ವಾಮಿ ಆರೋಪ ಮಾಡಿದ್ದರು. ಇದಕ್ಕೆ ಡಿಕೆ ಶಿವಕುಮಾರ್​ ಪ್ರತಿಕ್ರಿಯೆ ನೀಡಿದ್ದಾರೆ.

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ (DK Shivakumar) ಮತ್ತು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಮಧ್ಯೆ ಆರೋಪ, ಪ್ರತ್ಯಾರೋಪ ಜೋರಾಗಿ ನಡೆಯುತ್ತಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಅವರು ಅಕ್ರಮವಾಗಿ ಆಸ್ತಿ ಗಳಿಸಿದ್ದಾರೆ. ಅವರ ಆಸ್ತಿ ಲೆಕ್ಕ ಕೊಡಲಿ ಎಂದು ಜೆಡಿಎಸ್​ ರಾಜ್ಯಾಧ್ಯಕ್ಷ ಹೆಚ್​ಡಿ ಕುಮಾರಸ್ವಾಮಿ ರವಿವಾರ ಮೈಸೂರು ಚಲೊ ಪಾದಯಾತ್ರೆಯಲ್ಲಿ ಆರೋಪ ಮಾಡಿದ್ದರು. ಇದಕ್ಕೆ ಡಿಕೆ ಶಿವಕುಮಾರ್​ ಗಡುಗಿದ್ದು, ನಿನ್ನ ಪ್ರಶ್ನೆಗೆ ಉತ್ತರ ಕೊಡೊಣ. ಮೊದಲು ಈ ಹಿಂದೆ ನೀವು ಮಾಡಿರುವ ಹಗರಣಗಳಿಗೆ ಉತ್ತರ ಕೊಡಿ ಅಂತ ಕೇಳುತ್ತಿದ್ದೇವೆ. ನಿನ್ನ ಸಹೋದರನ ಆಸ್ತಿ ಲೆಕ್ಕ ಕೊಡು. ನಿನ್ನ ಅಧಿಕಾರ ಹೇಗೆ ದುರುಪಯೋಗ ಆಯ್ತು? ಅದೆಲ್ಲ ಮೊದಲು ಲೆಕ್ಕ ಕೊಡು ಎಂದು ಏಕವಚನದಲ್ಲಿ ವಾಗ್ದಾಳಿ ಮಾಡಿದರು. ಕೇಂದ್ರ ಸರ್ಕಾರದಿಂದ ಏಕೆ ಹಣ ಬಿಡುಗಡೆ ಮಾಡಿಸಲಿಲ್ಲ. ಹಿಂದೆ‌ ನೀವು ಏನೇನು ಮಾಡಿದ್ರಿ ಎಂದು ಜನರಿಗೆ ತಿಳಿಸಲು ಈ ಜನಾಂದೋಲನ ಕಾರ್ಯಕ್ರಮ ಮಾಡುತ್ತಿದ್ದೇವೆ ಎಂದು ಹೇಳಿದರು.

ಲೋಕಸಭೆ ಚುನಾವಣೆಯಿಂದ ಇಬ್ಬರು ನಾಯಕರ ನಡುವೆ ಮಾತಿನ ಗುದ್ದಾಟ ನಡೆಯುತ್ತಲೇ ಇದೆ. ಡಿಕೆ ಶಿವಕುಮಾರ್​ ವಿರುದ್ಧ ಹೆಚ್​ಡಿ ಕುಮಾರಸ್ವಾಮಿ ಸಿಡಿ ಶಿವು ಎಂದು ವ್ಯಂಗ್ಯವಾಡಿದ್ದರು. ನಂತರ ಇಬ್ಬರ ವಾಕ್ಸಮರ ಆಸ್ತಿ ವಿಚಾರಕ್ಕೆ ತಿರುಗಿದೆ. ಪರಸ್ಪರು ಆಸ್ತಿ ಲೆಕ್ಕ ಕೊಡಿ ಎಂದು ಪ್ರಶ್ನೆ ಮಾಡುತ್ತಿದ್ದಾರೆ. ಡಿಕೆ ಶಿವಕುಮಾರ್​ ಅವರು ವಿಧವೆಯರನ್ನು ಬೆದರಿಸಿ ಆಸ್ತಿ ಬರೆಸಿಕೊಂಡಿದ್ದಾರೆ. ನಿವೃತ್ತ ಯೋಧನ ಪುತ್ರಿಯನ್ನು ಅಪಹರಿಸಿ ಆಸ್ತಿ ಬರೆಸಿಕೊಂಡಿದ್ದಾರೆ ಎಂದು ಹೆಚ್​ಡಿ ಕುಮಾರಸ್ವಾಮಿ ಅವರು ಆರೋಪ ಮಾಡಿದ್ದರು.

ಇದನ್ನೂ ಓದಿ: ನಿವೃತ್ತ ಯೋಧನ ಮಗಳನ್ನು ಅಪಹರಿಸಿ ಜಮೀನು ಬರೆಸಿಕೊಂಡಿದ್ದೀರಿ: ಡಿಕಶಿ ವಿರುದ್ಧ ಕುಮಾರಸ್ವಾಮಿ ಆರೋಪ 

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ