AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾರ್ಮೂಸ್ ಜಲಸಂಧಿಯಲ್ಲಿ ಕುವೈತ್ ತೈಲ ಟ್ಯಾಂಕರ್ ಮೇಲೆ ಕ್ಷಿಪಣಿ ದಾಳಿ: ಐವರು ಭಾರತೀಯ ನಾವಿಕರ ರಕ್ಷಣೆ

ಹಾರ್ಮೂಸ್ ಜಲಸಂಧಿಯಲ್ಲಿ ಕುವೈತ್ ತೈಲ ಟ್ಯಾಂಕರ್ ಮೇಲೆ ಕ್ಷಿಪಣಿ ದಾಳಿ: ಐವರು ಭಾರತೀಯ ನಾವಿಕರ ರಕ್ಷಣೆ

ಅಕ್ಷಯ್​ ಪಲ್ಲಮಜಲು​​
|

Updated on:Oct 03, 2026 | 11:13 AM

Share

ಹಾರ್ಮೂಸ್ ಜಲಸಂಧಿಯಲ್ಲಿ ಕುವೈತ್ ಧ್ವಜ ಹೊತ್ತ ಕಚ್ಚಾ ತೈಲ ಟ್ಯಾಂಕರ್ ಮೇಲೆ ಕ್ಷಿಪಣಿ ದಾಳಿಯಾಗಿದೆ. ಈ ಘಟನೆಯಲ್ಲಿ ಹಡಗಿನಲ್ಲಿದ್ದ ಐವರು ಭಾರತೀಯರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ. ಓಮನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಈ ಬಗ್ಗೆ ಮಾಹಿತಿ ನೀಡಿದ್ದು, ಎಲ್ಲ ಸಿಬ್ಬಂದಿ ಕ್ಷೇಮವಾಗಿದ್ದಾರೆ ಎಂದು ತಿಳಿಸಿದೆ. ಈ ದಾಳಿ ಹಡಗು ಸಾಗಾಟದ ಸುರಕ್ಷತೆಯ ಬಗ್ಗೆ ಮತ್ತೆ ಆತಂಕ ಮೂಡಿಸಿದೆ.

ಹಾರ್ಮೂಸ್ ಜಲಸಂಧಿಯಲ್ಲಿ ಕುವೈತ್ ಧ್ವಜ ಹೊತ್ತ ಕಚ್ಚಾ ತೈಲ ಟ್ಯಾಂಕರ್ ಮೇಲೆ ಕ್ಷಿಪಣಿ ದಾಳಿ ನಡೆದಿದೆ. ಈ ಘಟನೆಯಲ್ಲಿ ಎಂಟಿ ಕಾಜಿಮಾ III (MT Kazimah III) ಹೆಸರಿನ ತೈಲ ಟ್ಯಾಂಕರ್ ಗುರಿಯಾಗಿದ್ದು, ಹಡಗಿನಲ್ಲಿದ್ದ ಐವರು ಭಾರತೀಯ ಸಿಬ್ಬಂದಿಯನ್ನು ಯಶಸ್ವಿಯಾಗಿ ರಕ್ಷಿಸಲಾಗಿದೆ. ಓಮನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಈ ಬಗ್ಗೆ ಅಧಿಕೃತ ಮಾಹಿತಿ ನೀಡಿದ್ದು, ದಾಳಿಗೊಳಗಾದ ಹಡಗಿನಲ್ಲಿದ್ದ ಎಲ್ಲ ಭಾರತೀಯ ಪ್ರಜೆಗಳು ಸುರಕ್ಷಿತವಾಗಿದ್ದಾರೆ ಎಂದು ಖಚಿತಪಡಿಸಿದೆ. ಕುವೈತ್ ಧ್ವಜದ ಅಡಿಯಲ್ಲಿ ಕಚ್ಚಾ ತೈಲವನ್ನು ಸಾಗಿಸುತ್ತಿದ್ದ ಟ್ಯಾಂಕರ್ ಮೇಲೆ ಇದ್ದಕ್ಕಿದ್ದಂತೆ ದಾಳಿ ನಡೆದಿದೆ. ತೈಲ ಟ್ಯಾಂಕರ್ ಮೇಲೆ ನಡೆದ ಈ ಅಟ್ಯಾಕ್‌ನಿಂದಾಗಿ ಪ್ರಾದೇಶಿಕ ಸಮುದ್ರ ಮಾರ್ಗಗಳಲ್ಲಿ ತೈಲ ಸಾಗಾಟದ ಭದ್ರತೆಯ ಕುರಿತು ಗಂಭೀರ ಪ್ರಶ್ನೆಗಳು ಎದ್ದಿವೆ. ಹಾರ್ಮೂಸ್ ಜಲಸಂಧಿಯು ವಿಶ್ವದ ಪ್ರಮುಖ ತೈಲ ಸಾಗಾಟ ಮಾರ್ಗಗಳಲ್ಲಿ ಒಂದಾಗಿದ್ದು, ಇಂತಹ ದಾಳಿಗಳು ವ್ಯಾಪಾರ ಮತ್ತು ಅಂತಾರಾಷ್ಟ್ರೀಯ ಸಂಬಂಧಗಳ ಮೇಲೆ ಪರಿಣಾಮ ಬೀರಬಹುದು. ಭಾರತೀಯ ರಾಯಭಾರ ಕಚೇರಿಯ ತ್ವರಿತ ಕ್ರಮದಿಂದಾಗಿ ಭಾರತೀಯ ನಾವಿಕರು ಅಪಾಯದಿಂದ ಪಾರಾಗಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Oct 03, 2026 11:13 AM

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More