ಬೆಳಗಿನ ಜಾವ ಯಶವಂತಪುರ ಫ್ಲೈಓವರ್​ನಿಂದ ಕೆಳಗುರುಳಿದ ಕಾರು; ಐವರಿಗೆ ಗಾಯ, ಮೂವರ ಸ್ಥಿತಿ ಗಂಭೀರ

ಅರುಣ್​ ಕುಮಾರ್​ ಬೆಳ್ಳಿ

Updated on: Sep 03, 2024 | 10:08 AM

ಕಾರು, ಬೈಕ್ ಅಥವಾ ಹೆವಿ ಮೋಟಾರುಗಳು ಫ್ಲೈಓವರ್ ಗಳ ಮೇಲಿಂದ ಕೆಳಗೆ ಬೀಳುವ ಸಂದರ್ಭಗಳು ಅಪರೂಪ. ವಾಹನಗಳ ನಡುವೆ ಢಿಕ್ಕಿ ಸಂಭವಿಸಿದಾಗ ಹಾಗೆ ಅಗೋದುಂಟು. ಆದರೆ, ಈ ಪ್ರಕರಣದಲ್ಲಿ ಢಿಕ್ಕಿಯೇನೂ ಜರುಗಿಲ್ಲ, ಚಾಲಕ ನಿಯಂತ್ರಣ ಕಳೆದುಕೊಂಡಾಗ ಕಾರು ಫ್ಲೈವರ್ ಗೋಡೆಗೆ ಘರ್ಷಿಸಿ ಕೆಳಗುರುಳಿದೆ ಎಂದು ಹೇಳಲಾಗುತ್ತಿದೆ.

ಬೆಂಗಳೂರು: ನಗರದಲ್ಲಿ ಬೆಳಗಿನ ಜಾವ ಭೀಕರ ಅಪಘಾತ ಸಂಭವಿಸಿದ್ದು ತಮಿಳುನಾಡು ರಾಜ್ಯ ರಿಜಿಸ್ಟ್ರೇಷನ್ ನಂಬರ್ ಹೊಂದಿರುವ ಕಾರೊಂದು ಯಶವಂತಪುರದ ಫ್ಲೈಓವರ್ ಮೇಲೆ ಚಲಿಸುತ್ತಿದ್ದಾಗ ಚಾಲಕನ ಅಜಾರೂಕತೆಯಿಂದ ಆಯತಪ್ಪಿ ಕೆಳಗೆ ಬಿದ್ದಿದೆ. ಕಾರಲ್ಲಿದ್ದ ಐವರು ಗಾಯಗೊಂಡಿದ್ದು ಮೂವರ ಸ್ಥಿತಿ ಚಿಂತಾಜನಕವಾಗಿದೆ ಎಂದು ನಮ್ಮ ವರದಿಗಾರ ಹೇಳುತ್ತಾರೆ. ಪೊಲೀಸರು ಮತ್ತು ಸ್ಥಳೀಯರು ಗಾಯಗೊಂಡವರನ್ನು ಹತ್ತಿರದ ಖಾಸಗಿ ಅಸ್ಪತ್ರೆಯೊಂದರಲ್ಲಿ ದಾಖಲಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಭೀಕರ ಅಪಘಾತ; ಸಿನಿಮಾ ಸ್ಟೈಲ್​ಲ್ಲಿ ಕೆರೆಗೆ ಹಾರಿದ ಕಾರು!

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.