Karnataka Assembly Polls; ಬಿಜೆಪಿ ಅಧಿಕಾರಕ್ಕೆ ಬಂದರೆ 5 ಕೆಜಿ ಅಕ್ಕಿ ಜೊತೆ ಇನ್ನೈದು ಕೆಜಿ ಸಿರಿಧಾನ್ಯ ಮತ್ತು ಅರ್ಧ ಲೀಟರ್ ನಂದಿನಿ ಹಾಲು ಕೊಡುತ್ತೇವೆ: ಬಸವರಾಜ ಬೊಮ್ಮಾಯಿ
ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಇಂದು ಬೆಂಗಳೂರಲ್ಲಿ ಪಕ್ಷದ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು.
ಬೆಂಗಳೂರು: ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ (JP Nadda) ಇಂದು ನಗರದಲ್ಲಿ ಪಕ್ಷದ ಚುನಾವಣಾ ಪ್ರಣಾಳಿಕೆಯನ್ನು (manifesto) ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ವೇದಿಕೆಯ ಮೇಲೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai), ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪ, ಸದಾನಂದ ಗೌಡ, ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ, ಶೋಭಾ ಕರಂದ್ಲಾಜೆ ಮೊದಲಾದವರು ಹಾಜರಿದ್ದರು. ಪ್ರಣಾಳಿಕೆಯ ಮುಖ್ಯಾಂಶಗಳ ಬಗ್ಗೆ ಮಾತಾಡಿದ ಬೊಮ್ಮಾಯಿ, ಬಿಪಿಎಲ್ ಕುಟುಂಬಗಳಿಗೆ ಈಗಾಗಲೇ ನೀಡುತ್ತಿರುವ 5 ಕೇಜಿ ಅಕ್ಕಿಯ ಜೊತೆ 5 ಕೇಜಿ ಸಿರಿಧಾನ್ಯ ಮತ್ತು ಪ್ರತಿದಿನ ಅರ್ಧ ಲೀಟರ್ ನಂದಿನಿ ಹಾಲನ್ನು ಸಹ ಬಿಜೆಪಿ ಅಧಿಕಾರಕ್ಕೆ ಬಂದರೆ ನೀಡುವುದಾಗಿ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: May 01, 2023 12:43 PM