AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಲಕ್ನೋದಲ್ಲಿ ಚಲಿಸುತ್ತಿದ್ದ ಬಸ್​ನಲ್ಲಿ ಏಕಾಏಕಿ ಕಾಣಿಸಿಕೊಂಡ ಬೆಂಕಿ, ಮಕ್ಕಳು ಸೇರಿ ಐವರು ಸಾವು

Video: ಲಕ್ನೋದಲ್ಲಿ ಚಲಿಸುತ್ತಿದ್ದ ಬಸ್​ನಲ್ಲಿ ಏಕಾಏಕಿ ಕಾಣಿಸಿಕೊಂಡ ಬೆಂಕಿ, ಮಕ್ಕಳು ಸೇರಿ ಐವರು ಸಾವು

ನಯನಾ ರಾಜೀವ್
|

Updated on: May 15, 2025 | 8:11 AM

Share

ಚಲಿಸುತ್ತಿದ್ದ ಬಸ್​ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ನೋಡನೋಡುತ್ತಲೇ ಬಸ್ ಸುಟ್ಟು ಭಸ್ಮವಾಗಿದೆ. ಇಬ್ಬರು ಮಕ್ಕಳು ಸೇರಿ ಐವರು ಪ್ರಾಣ ಕಳೆದುಕೊಂಡಿರುವ ಘಟನೆ ಲಕ್ನೋದಲ್ಲಿ ನಡೆದಿದೆ. ಬಿಹಾರದಿಂದ ದೆಹಲಿಗೆ ತೆರಳುತ್ತಿದ್ದ ಬಸ್ಸಿನಲ್ಲಿ ಬೆಳಗ್ಗೆ 5 ಗಂಟೆ ಸುಮಾರಿಗೆ ಮೋಹನ್ ಲಾಲ್ ಗಂಜ್ ಬಳಿಯ ಕಿಸಾನ್ ಪಥ್ ನಲ್ಲಿ ಹಠಾತ್ತನೆ ಬೆಂಕಿ ಕಾಣಿಸಿಕೊಂಡಿದೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ. ಈ ಸಮಯದಲ್ಲಿ ಪ್ರಯಾಣಿಕರು ನಿದ್ರೆ ಮಂಪರಿನಲ್ಲಿದ್ದರು.

ಲಕ್ನೋ, ಮೇ 15: ಚಲಿಸುತ್ತಿದ್ದ ಬಸ್​ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ನೋಡನೋಡುತ್ತಲೇ ಬಸ್ ಸುಟ್ಟು ಭಸ್ಮವಾಗಿದೆ. ಇಬ್ಬರು ಮಕ್ಕಳು ಸೇರಿ ಐವರು ಪ್ರಾಣ ಕಳೆದುಕೊಂಡಿರುವ ಘಟನೆ ಲಕ್ನೋದಲ್ಲಿ ನಡೆದಿದೆ. ಬಿಹಾರದಿಂದ ದೆಹಲಿಗೆ ತೆರಳುತ್ತಿದ್ದ ಬಸ್ಸಿನಲ್ಲಿ ಬೆಳಗ್ಗೆ 5 ಗಂಟೆ ಸುಮಾರಿಗೆ ಮೋಹನ್ ಲಾಲ್ ಗಂಜ್ ಬಳಿಯ ಕಿಸಾನ್ ಪಥ್ ನಲ್ಲಿ ಹಠಾತ್ತನೆ ಬೆಂಕಿ ಕಾಣಿಸಿಕೊಂಡಿದೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ. ಈ ಸಮಯದಲ್ಲಿ ಪ್ರಯಾಣಿಕರು ನಿದ್ರೆ ಮಂಪರಿನಲ್ಲಿದ್ದರು. ಬಸ್‌ನಲ್ಲಿ ಹೊಗೆ ತುಂಬಲು ಪ್ರಾರಂಭಿಸಿದ ನಂತರವೇ ಅವರು ಎಚ್ಚರಗೊಂಡರು. ಆಘಾತಕಾರಿ ಸಂಗತಿಯೆಂದರೆ, ಚಾಲಕ ಕಿಟಕಿ ಒಡೆದು ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ವರದಿಯಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ 30 ನಿಮಿಷಗಳಲ್ಲಿ ಬೆಂಕಿಯನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾದರು, ಆದರೆ ಆ ಹೊತ್ತಿಗೆ ಇಡೀ ಬಸ್ ಸುಟ್ಟು ಭಸ್ಮವಾಗಿತ್ತು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ