ಛತ್ತೀಸ್ಗಢ: 48 ಗಂಟೆಗಳ ಮಳೆಗೆ ಕುಸಿದ ಬೆಟ್ಟ: ಅಮರಕಂಟಕ ಮಾರ್ಗದಲ್ಲಿ ಐದು ಕಡೆ ಭೂಕುಸಿತ, ಸಂಚಾರ ಸಂಪೂರ್ಣ ಸ್ಥಗಿತ
ಛತ್ತೀಸ್‌ಗಢದಲ್ಲಿ ಕಳೆದ 48 ಗಂಟೆಗಳಿಂದ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಜಲೇಶ್ವರ್–ಅಮರಕಂಟಕ ಮಾರ್ಗದಲ್ಲಿ ಭಾರಿ ಭೂಕುಸಿತ ಸಂಭವಿಸಿದೆ. ಬೆಟ್ಟದ ದೊಡ್ಡ ಪ್ರಮಾಣದ ಮಣ್ಣು ಮತ್ತು ಬಂಡೆಗಳು ರಸ್ತೆ ಮೇಲೆ ಕುಸಿದು ಬಿದ್ದ ಪರಿಣಾಮ ಐದು ವಿಭಿನ್ನ ಸ್ಥಳಗಳಲ್ಲಿ ರಸ್ತೆ ಸಂಪೂರ್ಣ ಬಂದ್ ಆಗಿದೆ. ಈ ಮಾರ್ಗವು ಅಮರಕಂಟಕಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ ಆಗಿರುವುದರಿಂದ ಯಾತ್ರಿಕರು ಹಾಗೂ ಸ್ಥಳೀಯರ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ. ಭೂಕುಸಿತ ಸಂಭವಿಸಿದ ಪ್ರದೇಶಗಳಲ್ಲಿ ಮಣ್ಣು, ಕಲ್ಲು ಮತ್ತು ಮರಗಳು ರಸ್ತೆಯ ಮೇಲೆ ಬಿದ್ದಿರುವುದರಿಂದ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.
ಗೌರೆಲಾ, ಸೆಪ್ಟೆಂಬರ್ 28: ಛತ್ತೀಸ್‌ಗಢದಲ್ಲಿ ಕಳೆದ 48 ಗಂಟೆಗಳಿಂದ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಜಲೇಶ್ವರ್–ಅಮರಕಂಟಕ ಮಾರ್ಗದಲ್ಲಿ ಭಾರಿ ಭೂಕುಸಿತ ಸಂಭವಿಸಿದೆ. ಬೆಟ್ಟದ ದೊಡ್ಡ ಪ್ರಮಾಣದ ಮಣ್ಣು ಮತ್ತು ಬಂಡೆಗಳು ರಸ್ತೆ ಮೇಲೆ ಕುಸಿದು ಬಿದ್ದ ಪರಿಣಾಮ ಐದು ವಿಭಿನ್ನ ಸ್ಥಳಗಳಲ್ಲಿ ರಸ್ತೆ ಸಂಪೂರ್ಣ ಬಂದ್ ಆಗಿದೆ. ಈ ಮಾರ್ಗವು ಅಮರಕಂಟಕಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ ಆಗಿರುವುದರಿಂದ ಯಾತ್ರಿಕರು ಹಾಗೂ ಸ್ಥಳೀಯರ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ. ಭೂಕುಸಿತ ಸಂಭವಿಸಿದ ಪ್ರದೇಶಗಳಲ್ಲಿ ಮಣ್ಣು, ಕಲ್ಲು ಮತ್ತು ಮರಗಳು ರಸ್ತೆಯ ಮೇಲೆ ಬಿದ್ದಿರುವುದರಿಂದ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.
ಆಡಳಿತದ ಮಾಹಿತಿ ಪ್ರಕಾರ, ಜಲೇಶ್ವರ್–ಅಮರಕಂಟಕ ಮಾರ್ಗದಲ್ಲಿ ಭಾರೀ ವಾಹನಗಳ ಸಂಚಾರವನ್ನು ಕಳೆದ ನಾಲ್ಕು ತಿಂಗಳಿಂದಲೇ ಭೂಕುಸಿತದ ಅಪಾಯದ ಕಾರಣ ನಿರ್ಬಂಧಿಸಲಾಗಿತ್ತು. ಇದೀಗ ನಿರಂತರ ಮಳೆಯಿಂದ ಪರಿಸ್ಥಿತಿ ಮತ್ತಷ್ಟು ಗಂಭೀರವಾಗಿದೆ. ಸ್ಥಳಕ್ಕೆ ರಸ್ತೆ ನಿರ್ಮಾಣ ಇಲಾಖೆ, ಪೊಲೀಸ್ ಹಾಗೂ ವಿಪತ್ತು ನಿರ್ವಹಣಾ ತಂಡಗಳು ತೆರಳಿ ಮಣ್ಣು ಮತ್ತು ಬಂಡೆಗಳನ್ನು ತೆರವುಗೊಳಿಸುವ ಕಾರ್ಯ ಆರಂಭಿಸಿವೆ. ಆದರೆ ಮಳೆ ಮುಂದುವರಿಯುತ್ತಿರುವ ಕಾರಣ ಕಾರ್ಯಾಚರಣೆಗೆ ಅಡಚಣೆ ಉಂಟಾಗಿದೆ. ಅಧಿಕಾರಿಗಳು ಸಾರ್ವಜನಿಕರಿಗೆ ಅಗತ್ಯವಿಲ್ಲದ ಪ್ರಯಾಣವನ್ನು ತಪ್ಪಿಸುವಂತೆ ಸೂಚನೆ ನೀಡಿದ್ದಾರೆ. ಪರಿಸ್ಥಿತಿ ಸುಧಾರಿಸಿದ ಬಳಿಕ ಮಾತ್ರ ರಸ್ತೆ ಸಂಚಾರ ಪುನರಾರಂಭಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ