ಕಾವೇರಿ ನದಿಯಲ್ಲಿ ಐವರು ಜಲಸಮಾಧಿ ಕೇಸ್​: ಘಟನೆಯಲ್ಲಿ ಬದುಕುಳಿದ ಏಕೈಕ ವ್ಯಕ್ತಿ ಹೇಳಿದ್ದೇನು?

Edited By:

Updated on: Jun 25, 2026 | 11:46 AM

ಮುಖ್ಯಾಂಶಗಳು

  • ಕಾವೇರಿ ನದಿಯಲ್ಲಿ ನಿನ್ನೆ ಐವರು ಜಲಸಮಾಧಿ ಪ್ರಕರಣ
  • ಘಟನೆ ಬಗ್ಗೆ ಬದುಕುಳಿದ ಏಕೈಕ ವ್ಯಕ್ತಿಯಿಂದ ವಿವರಣೆ
  • ಆ ಕ್ಷಣದಲ್ಲಿ ಆಗಿದ್ದೇನೆಂದು ಇಂಚಿಂಚೂ ಬಿಚ್ಚಿಟ್ಟ ವ್ಯಕ್ತಿ

Mandya News: ಮಂಡ್ಯದ ಮುತ್ತತ್ತಿ ಕಾವೇರಿ ನದಿಯಲ್ಲಿ ಕಾಲು ಜಾರಿ ಮುಳುಗುತ್ತಿದ್ದವರನ್ನು ರಕ್ಷಿಸಲು ಹೋಗಿ ಒಂದೇ ಕುಟುಂಬದ ನಾಲ್ವರು ಸೇರಿ ಒಟ್ಟು ಐದು ಮಂದಿ ಜಲಸಮಾಧಿಯಾದ ದಾರುಣ ಘಟನೆ ಮುತ್ತತ್ತಿಯಲ್ಲಿ ನಡೆದಿತ್ತು. ಈ ವೇಳೆ ಸ್ಥಳೀಯರ ಸಮಯಪ್ರಜ್ಞೆಯಿಂದ ಬದುಕುಳಿದ ಏಕೈಕ ವ್ಯಕ್ತಿ ಘಟನೆಯ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದ್ದಾರೆ. ಆ ಕ್ಷಣ ಅಲ್ಲಿ ಆಗಿದ್ದೇನೆಂಬ ಬಗ್ಗೆ ವಿವರಿಸಿದ್ದಾರೆ.

ಮಂಡ್ಯ, ಜೂನ್​, 25: ಮುತ್ತತ್ತಿಯ ಕಾವೇರಿ ನದಿಯಲ್ಲಿ ಜಲಸಮಾಧಿಯಾಗಿದ್ದ ಐವರ ಮರಣೋತ್ತರ ಪರೀಕ್ಷೆ ಮಂಡ್ಯದ ಮಿಮ್ಸ್ ಶವಾಗಾರದಲ್ಲಿ ನಡೆದಿದೆ. ಶವಾಗಾರದ ಬಳಿ ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ತಮ್ಮವರನ್ನು ಕಳೆದುಕೊಂಡು ಗೋಳಾಡುತ್ತಿರುವ ದೃಶ್ಯ ಕರುಳು ಹಿಂಡುವಂತಿದೆ. ಇನ್ನು ಘಟನೆಯಲ್ಲಿ ಬದುಕುಳಿದಿರುವ ರವಿ ಏನಾಯ್ತು ಎಂಬುದನ್ನು ವಿವರಿಸಿದ್ದಾರೆ. ಬೆಂಗಳೂರಿನಿಂದ ಕಬ್ಬಾಳಿಗೆ ಬಂದಿದ್ದ ನಾವು ಬೀಗರೂಟ ಮುಗಿಸಿ ತಾನೂ ಸೇರಿದಂತೆ 6 ಜನ ಕಾರಿನಲ್ಲಿ ಮುತ್ತತ್ತಿಗೆ ಹೋಗಿದ್ದೆವು. ನೀರಿನಲ್ಲಿ ಆಟವಾಡುವಾಗ ಅಕ್ಕ ವಿಜಯಮ್ಮ ಕಾಲು ಜಾರಿ ನೀರಿನಲ್ಲಿ ಮುಳುಗಿದ್ದಾರೆ. ಅವರನ್ನ ರಕ್ಷಿಸಲು ಪತ್ನಿ ಶ್ವೇತಾ, ಮಗಳು ಚೈತ್ರಾ, ಅಕ್ಕನ ಮಗಳು ಪ್ರಿಯಾಂಕಾ ಪ್ರಯತ್ನಿಸಿದ್ದಾರೆ. ಈ ವೇಳೆ ನೀರಿನಲ್ಲಿ ಮುಳುಗುತ್ತಿದ್ದ ಎಲ್ಲರನ್ನೂ ಕಾಪಾಡಲೆಂದು ನೀರಿಗಿಳಿದ ಕಾರು ಚಾಲಕ ಮತ್ತು ಸ್ನೇಹಿತನಾಗಿರುವ ಮಹೇಶ್​​ ಕೂಡ ಘಟನೆಯಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ರಕ್ಷಿಸಲು ಹೋಗಿ ನೀರಿಗೆ ಬಿದ್ದಿದ್ದ ತನ್ನನ್ನು ಸ್ಥಳೀಯರು ಕಾಪಾಡಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Jun 25, 2026 11:34 AM
Loading...
Unable to load recommendations.
Follow Us
ದಿಲೀಪ್​, ಚೌಡಹಳ್ಳಿ

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸಿದ್ದೇನೆ. ಸಧ್ಯ ಮಂಡ್ಯ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More