ಪೋಲೆಂಡ್‌ನಲ್ಲಿ ಭೀಕರ ಗುಂಡಿನ ದಾಳಿಗೆ ಐವರು ಬಲಿ; ದಾಳಿಕೋರನನ್ನು ಗುಂಡಿಟ್ಟು ಕೊಂದ ಪೊಲೀಸರು!

ಪೋಲೆಂಡ್‌ನ ಪ್ರಸಿದ್ಧ ಪ್ರವಾಸಿ ಹಾಗೂ ಐತಿಹಾಸಿಕ ನಗರಿ ಕ್ರಾಕೋವ್‌ನ ಮುಖ್ಯ ಮಾರುಕಟ್ಟೆ ಚೌಕದಲ್ಲಿ ಭೀಕರ ಗುಂಡಿನ ದಾಳಿ ನಡೆದಿದ್ದು, 5 ಮಂದಿ ಮೃತಪಟ್ಟು 12ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರಮುಖ ಪ್ರವಾಸಿ ತಾಣವಾಗಿರುವ ನಗರದ ಚೌಕಕ್ಕೆ ಕಾರಿನಲ್ಲಿ ಬಂದ ಬಂದೂಕುಧಾರಿಯೊಬ್ಬ ಸಾರ್ವಜನಿಕರ ಮೇಲೆ ಏಕಾಏಕಿ ಗುಂಡು ಹಾರಿಸಿದ್ದಾನೆ. ಈ ಘಟನೆ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಪೋಲೆಂಡ್ ಪೊಲೀಸರು ಹಾಗೂ ಭದ್ರತಾ ಸಿಬ್ಬಂದಿ ಪ್ರತಿದಾಳಿ ನಡೆಸಿದ್ದಾರೆ. ಪೊಲೀಸರು ನಡೆಸಿದ ಗುಂಡಿನ ದಾಳಿಯಲ್ಲಿ ಗಾಯಗೊಂಡ ಆರೋಪಿಯನ್ನು ವಶಕ್ಕೆ ಪಡೆಯಲಾಗಿದ್ದು, ಆಸ್ಪತ್ರೆಯಲ್ಲಿ ಆತ ಮೃತಪಟ್ಟಿದ್ದಾನೆ.

ಪೋಲೆಂಡ್‌ನಲ್ಲಿ ಭೀಕರ ಗುಂಡಿನ ದಾಳಿಗೆ ಐವರು ಬಲಿ; ದಾಳಿಕೋರನನ್ನು ಗುಂಡಿಟ್ಟು ಕೊಂದ ಪೊಲೀಸರು!
ಪೋಲೆಂಡ್‌ನ ಕ್ರಾಕೋವ್‌ನಲ್ಲಿ ಗುಂಡಿನ ದಾಳಿ

Updated on: Nov 07, 2026 | 10:32 PM

ಕ್ರಾಕೋವ್, ನವೆಂಬರ್ 7: ಪೋಲೆಂಡ್‌ನ ಕ್ರಾಕೋವ್ ನಗರದ ಕೇಂದ್ರ ಭಾಗದಲ್ಲಿ ಇಂದು ಭೀಕರ ಗುಂಡಿನ ದಾಳಿ ನಡೆದಿದ್ದು, ಐವರು ಮೃತಪಟ್ಟು ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕೃತ್ಯ ಎಸಗಿದ ಬಂದೂಕುಧಾರಿಯನ್ನು ಪೊಲೀಸರು ಗುಂಡಿಟ್ಟು ಕೊಂದಿದ್ದಾರೆ. ಈ ಘಟನೆ ನಡೆದ ತಕ್ಷಣವೇ ತುರ್ತು ರಕ್ಷಣಾ ಪಡೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಸುತ್ತಮುತ್ತಲೂ ಹೈ ಅಲರ್ಟ್ ಘೋಷಿಸಲಾಗಿತ್ತು.

ಚಲಿಸುವ ಕಾರಿನಿಂದ ಗುಂಡಿನ ದಾಳಿ:

Loading...

ಆರ್‌ಎಫ್‌ಪಿ ವರದಿಯ ಪ್ರಕಾರ, ಅಪರಿಚಿತ ಬಂದೂಕುಧಾರಿಯೊಬ್ಬ ಇಂದು ಮಧ್ಯಾಹ್ನ ಸುಮಾರು 3 ಗಂಟೆಯ ಸುಮಾರಿಗೆ ಸ್ಲಾವ್ಕೋವ್ಸ್ಕಾ  ರಸ್ತೆಯಿಂದ ಕ್ರಾಕೋವ್‌ನ ಪ್ರಮುಖ ಮಾರುಕಟ್ಟೆ ಚೌಕದ ಕಡೆಗೆ ಚಲಿಸುತ್ತಿದ್ದ ಕಾರಿನಿಂದ ಅಲ್ಲಿದ್ದ ಜನರ ಮೇಲೆ ಏಕಾಏಕಿ ಗುಂಡಿನ ಮಳೆಗರೆದಿದ್ದಾನೆ. ಕೂಡಲೇ ಘಟನಾ ಸ್ಥಳಕ್ಕೆ ಆ್ಯಂಬುಲೆನ್ಸ್ ಹಾಗೂ ವೈದ್ಯಕೀಯ ಹೆಲಿಕಾಪ್ಟರ್ ಧಾವಿಸಿದ್ದು, ಗಾಯಾಳುಗಳಿಗೆ ಪ್ರಥಮ ಚಿಕಿತ್ಸೆ ನೀಡಿ ಆಸ್ಪತ್ರೆಗೆ ದಾಖಲಿಸಲಾಯಿತು. ದಾಳಿಕೋರನನ್ನು ಹಿಡಿಯಲು ಪೊಲೀಸರು ತಕ್ಷಣವೇ ಕಾರ್ಯಾಚರಣೆ ನಡೆಸಿ ಆತನನ್ನು ಗುಂಡಿಕ್ಕಿ ಕೊಂದಿದ್ದಾರೆ. ಭದ್ರತಾ ದೃಷ್ಟಿಯಿಂದ ಸ್ಥಳೀಯರು ಹಾಗೂ ಪ್ರವಾಸಿಗರು ಆ ಪ್ರದೇಶದಿಂದ ದೂರವಿರಲು ಪೊಲೀಸರು ಸೂಚನೆ ನೀಡಿದ್ದರು.


ಇದನ್ನೂ ಓದಿ: ಅಂತ್ಯಕ್ರಿಯೆ ವೇಳೆ ಚರ್ಚ್ ಮೇಲೆ ನುಗ್ಗಿ ಮನಬಂದಂತೆ ಗುಂಡಿನ ದಾಳಿ: ಜೋರ್ಡಾನ್‌ನಲ್ಲಿ 7 ಮಂದಿ ಸಾವು, 40 ಜನರಿಗೆ ಗಾಯ

ಪೋಲೆಂಡ್ ಪ್ರಧಾನಿ ಡೊನಾಲ್ಡ್ ಟಸ್ಕ್ ಪ್ರತಿಕ್ರಿಯೆ:

ಈ ಘಟನೆಯ ಕುರಿತು ಆಂತರಿಕ ಭದ್ರತಾ ಸಚಿವರಿಂದ ನಿರಂತರ ಮಾಹಿತಿ ಪಡೆಯುತ್ತಿರುವುದಾಗಿ ಪೋಲೆಂಡ್ ಪ್ರಧಾನಮಂತ್ರಿ ಡೊನಾಲ್ಡ್ ಟಸ್ಕ್ ತಿಳಿಸಿದ್ದಾರೆ. ಈ ಕುರಿತು ‘ಎಕ್ಸ್’ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, “ಕ್ರಾಕೋವ್‌ನಲ್ಲಿ ನಡೆದ ಭೀಕರ ಗುಂಡಿನ ದಾಳಿಯ ನಂತರದ ಪರಿಸ್ಥಿತಿಯ ಬಗ್ಗೆ ಆಂತರಿಕ ಭದ್ರತಾ ಸಚಿವರು ನನಗೆ ನಿರಂತರವಾಗಿ ಮಾಹಿತಿ ನೀಡುತ್ತಿದ್ದಾರೆ” ಎಂದು ಬರೆದುಕೊಂಡಿದ್ದಾರೆ. ಈ ಭೀಕರ ದಾಳಿಯ ಹಿನ್ನೆಲೆ ಕುರಿತು ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
Loading...
Unable to load recommendations.
Follow Us