ಬೆಂಗಳೂರು: ಬೈಕ್ಗೆ ಗುದ್ದಿ ಫ್ಲೈಓವರ್ನಿಂದ ಕೆಳಗೆ ಬಿದ್ದ ಕಾರು, ಐವರಿಗೆ ಗಂಭೀರ ಗಾಯ
ಯಶವಂತಪುರ ಸರ್ಕಲ್ ಬಳಿ ಮುಂಜಾನೆ 3.45ರಲ್ಲಿ ಬೈಕ್ಗೆ ಗುದ್ದಿದ ಕಾರು ಫ್ಲೈಓವರ್ನಿಂದ ಕೆಳಗೆ ಬಿದ್ದು ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ಇಬ್ಬರು ಯುವಕರು ಮತ್ತು ಓರ್ವ ಯುವತಿ ಸೇರಿ ಮೂವರು, ಬೈಕ್ನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಬೆಂಗಳೂರು, ಸೆಪ್ಟೆಂಬರ್.03: ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ದುರಂತದಲ್ಲಿ ಐವರಿಗೆ ಗಂಭೀರ ಗಾಯಗಳಾಗಿವೆ. ಯಶವಂತಪುರ ಸರ್ಕಲ್ ಬಳಿ ಮುಂಜಾನೆ 3.45ರಲ್ಲಿ ಬೈಕ್ಗೆ ಗುದ್ದಿದ ಕಾರು ಫ್ಲೈಓವರ್ನಿಂದ ಕೆಳಗೆ ಬಿದ್ದು ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ಮೂವರು, ಬೈಕ್ನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿವೆ.
ಐವರಲ್ಲಿ ಮೂವರ ಸ್ಥಿತಿ ಗಂಭೀರವಾಗಿದ್ದು ಇಬ್ಬರಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಪೊಲೀಸರು, ಸ್ಥಳೀಯರು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿದ್ದಾರೆ. ಸ್ಯಾಂಕಿ ರಸ್ತೆಯಿಂದ ತುಮಕೂರು ರಸ್ತೆಗೆ ತೆರಳುತ್ತಿದ್ದ ಕಾರು ಬೈಕ್ಗೆ ಡಿಕ್ಕಿ ಹೊಡೆದು ಫ್ಲೈಓವರ್ ಮೇಲೆ ಡಿವೈಡರ್ನಿಂದ ಹಾರಿ ಬಿದ್ದಿದೆ. ತಮಿಳುನಾಡು ನೋಂದಣಿ TN37 DH9484 ಸಂಖ್ಯೆಯ ಕಾರು ಇದಾಗಿದ್ದು ಯಶವಂತಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ

