ಭೀಕರ ರಸ್ತೆ ಅಪಘಾತ: ತಾಯಿ ಜೊತೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಮಗು ದುರಂತ ಅಂತ್ಯ

Edited By:

Updated on: Sep 07, 2026 | 6:29 PM

ಬೆಂಗಳೂರಿನ ಉತ್ತರಹಳ್ಳಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐದು ವರ್ಷದ ಬಾಲಕ ಭವಿನ್ ಮೃತಪಟ್ಟಿದ್ದಾನೆ. ತಾಯಿ ಶುಭಲತಾ ಜೊತೆ ದ್ವಿಚಕ್ರ ವಾಹನದಲ್ಲಿ ಶಾಲೆಗೆ ತೆರಳುತ್ತಿದ್ದಾಗ, ಮತ್ತೊಂದು ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮವಾಗಿ ಅವರು ಕೆಳಗೆ ಬಿದ್ದಿದ್ದಾರೆ. ಈ ವೇಳೆ ಹಿಂದಿನಿಂದ ಬಂದ ಟಿಪ್ಪರ್ ಬಾಲಕನ ಮೇಲೆ ಹರಿದು, ಭವಿನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಟಿಪ್ಪರ್ ಚಾಲಕ ಪರಾರಿಯಾಗಿದ್ದು, ಕೆಂಗೇರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರು, ಸೆಪ್ಟೆಂಬರ್​​ 07: ನಗರದ ಉತ್ತರಹಳ್ಳಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐದು ವರ್ಷದ ಬಾಲಕ ಭವೀನ್ ದುರ್ಮರಣಕ್ಕೀಡಾಗಿದ್ದಾನೆ. ತಾಯಿ ಶುಭಲತಾ ಜೊತೆ ದ್ವಿಚಕ್ರ ವಾಹನದಲ್ಲಿ ಶಾಲೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ದುರಂತ ಸಂಭವಿಸಿದೆ. ಬೆಳಗ್ಗೆ ಸುಮಾರು 7:30 ರಿಂದ 7:45 ರ ಸಮಯದಲ್ಲಿ ಕೆಂಗೇರಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ನಡೆದಿದೆ. ಮೈಸೂರು ರಸ್ತೆಯಿಂದ ಉತ್ತರಹಳ್ಳಿ ಮುಖ್ಯ ರಸ್ತೆಯ ಮೂಲಕ ಬಿಜಿಎಸ್ ಆಸ್ಪತ್ರೆಯ ದಿಕ್ಕಿನಲ್ಲಿ ತಾಯಿ ಶುಭಲತಾ ಅವರು ಮಗು ಭವೀನ್ನನ್ನು ಸ್ಕೂಟರ್‌ನಲ್ಲಿ ಕರೆದುಕೊಂಡು ಹೋಗುತ್ತಿದ್ದರು. ಈ ವೇಳೆ, ಅವರ ಮುಂದೆ ಸಾಗುತ್ತಿದ್ದ ಮತ್ತೊಂದು ದ್ವಿಚಕ್ರ ವಾಹನ ಅವರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ತಾಯಿ ಮತ್ತು ಮಗು ರಸ್ತೆಗೆ ಬಿದ್ದಿದ್ದಾರೆ. ಮಗು ಭವಿನ್ ರಸ್ತೆಯ ಎಡಭಾಗಕ್ಕೆ ಬಿದ್ದ ತಕ್ಷಣವೇ, ಹಿಂದಿನಿಂದ ವೇಗವಾಗಿ ಬಂದ ಟಿಪ್ಪರ್ ಅವರ ಮೇಲೆ ಹರಿದಿದೆ. ಪರಿಣಾಮವಾಗಿ ಬಾಲಕ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ. ಈ ಸಂಬಂಧ ಕೆಂಗೇರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Sep 07, 2026 06:29 PM
Loading...
Unable to load recommendations.
Follow Us
ಪ್ರದೀಪ್​ ಚಿಕ್ಕಾಟಿ

ಮೂಲತಃ ಚಾಮರಾಜನಗರ ಜಿಲ್ಲೆಯವನಾಗಿದ್ದು, ಶಾಲಾ ದಿನಗಳಿಂದಲೂ ಮಾಧ್ಯಮಕ್ಕೆ ಸೇರುವ ಹಂಬಲ ಇತ್ತು. ಹೀಗಾಗಿ ಫೈರ್ ಅಂಡ್ ಸೇಫ್ಟಿ ಇಂಜಿನಿಯರಿಂಗ್ ವ್ಯಾಸಂಗ ಮಾಡಿ ಕೆಲಸಕ್ಕೆ ಸೇರಿದ್ದರು ಅ ಕೆಲಸ ಬಿಟ್ಟು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ವ್ಯಾಸಂಗ ಮಾಡಿದೆ. ಬಳಿಕ ಸುಮಾರು 7 ವರ್ಷ‌ದಿಂದ ಮೈಸೂರು, ಹೈದರಾಬಾದ್ ನ ಕೆಲ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, ಪ್ರಸ್ತುತ Tv9 ಕನ್ನಡದ ಕ್ರೈಂ ವರದಿಗಾರನಾಗಿದ್ದೇನೆ. ಓದು, ಬರಹ, ಪ್ರವಾಸ ನನ್ನಿಷ್ಟದ ಹವ್ಯಾಸಗಳು.

Read More