ಮೈಸೂರು-ಬೆಂಗಳೂರು ಹೆದ್ದಾರಿ ಅಂಡರ್ ಪಾಸ್ನಲ್ಲಿ ಪ್ರೀತಂಗೌಡ ಭಾವಚಿತ್ರವಿದ್ದ ಫ್ಲೆಕ್ಸ್ಗಳಿಗೆ ಬೆಂಕಿ
ಮಾಜಿ ಶಾಸಕ ಪ್ರೀತಂಗೌಡ ಭಾವಚಿತ್ರವಿದ್ದ ಫ್ಲೆಕ್ಸ್ ಗೆ ಕಿಡಿಗೇಡಿಗಳು ಬೆಂಕಿ ಇಟ್ಟಿದ್ದಾರೆ. ಪೆಟ್ರೋಲ್ ಹಾಕಿ ಫ್ಲೆಕ್ಸ್ ಗಳನ್ನ ಸುಟ್ಟುಹಾಕಿದ್ದಾರೆ. ಮಂಡ್ಯ ಹೊರವಲಯದ ಉಮ್ಮಡಹಳ್ಳಿ ಸಮೀಪ ಘಟನೆ ನಡೆದಿದೆ. ನಿನ್ನೆ ಪಾದಯಾತ್ರೆ ವೇಳೆಯೂ ಪ್ರೀತಂಗೌಡ ಪಾದಯಾತ್ರೆಯಲ್ಲಿ ಭಾಗಿಯಾಗಿದ್ದಕ್ಕೆ ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ನಡುವೆ ಗಲಾಟೆ ನಡೆದಿತ್ತು.
ಮಂಡ್ಯ, ಆಗಸ್ಟ್.08: ಬಿಜೆಪಿ ಮಾಜಿ ಶಾಸಕ ಪ್ರೀತಂಗೌಡ (Preetham Gowda) ಭಾವಚಿತ್ರವಿದ್ದ ಫ್ಲೆಕ್ಸ್ಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲಾಗಿದೆ. ಮಂಡ್ಯ ಹೊರವಲಯದ ಉಮ್ಮಡಹಳ್ಳಿ ಸಮೀಪ ಮೈಸೂರು-ಬೆಂಗಳೂರು ಹೆದ್ದಾರಿ ಅಂಡರ್ ಪಾಸ್ನಲ್ಲಿದ್ದ ಫ್ಲೆಕ್ಸ್ಗೆ ಕಿಡಿಗೇಡಿಗಳು ಬೆಂಕಿ ಇಟ್ಟಿದ್ದಾರೆ. ಬಿಜೆಪಿ, ಜೆಡಿಎಸ್ ನಾಯಕರನ್ನ ಸ್ವಾಗತಿಸಲು ಫ್ಲೆಕ್ಸ್ಗಳನ್ನು ಹಾಕಲಾಗಿತ್ತು. ಫ್ಲೆಕ್ಸ್ಗಳಲ್ಲಿ ಪ್ರೀತಂ ಫೋಟೋ ಹಾಕಿದ್ದಕ್ಕೆ ಬೆಂಕಿ ಹಾಕಿ ಆಕ್ರೋಶ ಹೊರ ಹಾಕಿದ್ದಾರೆ.
ನಿನ್ನೆ ಪಾದಯಾತ್ರೆ ವೇಳೆಯೂ ಪ್ರೀತಂಗೌಡ ಪಾದಯಾತ್ರೆಯಲ್ಲಿ ಭಾಗಿಯಾಗಿದ್ದಕ್ಕೆ ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ನಡುವೆ ಗಲಾಟೆ ನಡೆದಿತ್ತು. ಮತ್ತೊಂದೆಡೆ ಪ್ರೀತಂ ಪರವಾಗಿ ಬೆಂಬಲಿಗರು ಘೋಷಣೆ ಕೂಗಿದ್ದರು. ಇದರಿಂದ ಕೈಕೈ ಮಿಲಾಯಿಸುವ ಹಂತಕ್ಕೆ ಗಲಾಟೆ ಹೋಗಿತ್ತು. ಇದೀಗ ಮಾಜಿ ಶಾಸಕ ಪ್ರೀತಂ ಭಾವಚಿತ್ರವಿದ್ದ ಫ್ಲೆಕ್ಸ್ಗಳಿಗೆ ಬೆಂಕಿ ಇಡಲಾಗಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ

ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದು ಹಾರಿ ಬಿದ್ದ ಯುವಕ

ಸತೀಶ್ ಜಾರಕಿಹೊಳಿಗೆ ವಯಸ್ಸು 62 ಆದರೂ ಕ್ರೀಡಾಪಟುವಿನಂಥ ಪರ್ಸನಾಲಿಟಿ

ಅಜಯ್ ರಾವ್ ಓದಿದ್ದು ಎಸ್ಎಸ್ಎಲ್ಸಿ ತನಕ ಮಾತ್ರ; ಅಚ್ಚರಿ ವಿಷಯ ಹೇಳಿದ ನಟ

ಹೃಷಿಕೇಶದಲ್ಲಿ ರಿವರ್ ರಾಫ್ಟಿಂಗ್ ವೇಳೆ ಗಂಗಾ ನದಿಯಲ್ಲಿ ಮುಳುಗಿದ ಯುವಕ
