Bharath Jodo Yatra: ಪ್ರತಿಕೂಲ ಹವಾಮಾನ ಹಿನ್ನೆಲೆ ದೆಹಲಿ-ಶ್ರೀನಗರ ನಡುವೆ ವಿಮಾನ ಹಾರಾಟ ರದ್ದು; ದೆಹಲಿಯಲ್ಲೇ ಉಳಿದುಬಿಟ್ಟ ಸಿದ್ದರಾಮಯ್ಯ
ಪ್ರತಿಕೂಲ ಹವಾಮಾನದ ಹಿನ್ನೆಲೆಯಲ್ಲಿ ದೆಹಲಿಯಿಂದ ಶ್ರೀನgರಕ್ಕೆ ತೆರಳಬೇಕಿದ್ದ ಎಲ್ಲ ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ.
ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಅವರ ಭಾರತ್ ಜೋಡೋ ಯಾತ್ರೆಯ ಸಮಾರೋಪ ಸಮಾರಂಭ ಇಂದು ಶ್ರೀನಗರದಲ್ಲಿ (Srinagar) ನಡೆಯಲಿದ್ದು ರಾಜ್ಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ಹಾಗೂ ಎಮ್ ಬಿ ಪಾಟೀಲ, ಐವಾನ್ ಡಿಸೋಜ ಮತ್ತು ಇನ್ನಿತರು ಅದರಲ್ಲಿ ಭಾಗವಹಿಸುವುದು ಸಾಧ್ಯವಾಗುತ್ತಿಲ್ಲ. ಪ್ರತಿಕೂಲ ಹವಾಮಾನದ ಹಿನ್ನೆಲೆಯಲ್ಲಿ ದೆಹಲಿಯಿಂದ ಶ್ರೀನgರಕ್ಕೆ ತೆರಳಬೇಕಿದ್ದ ಎಲ್ಲ ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ. ಹಾಗಾಗಿ, ಭಾನುವಾರ ರಾತ್ರಿ ದೆಹಲಿ ತಲುಪಿದ್ದ ಸಿದ್ದರಾಮಯ್ಯ ವಿಮಾನ ನಿಲ್ದಾಣದಲ್ಲೇ ಉಳಿಯುವಂತಾಯಿತು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Jan 30, 2023 11:42 AM
Latest Videos