Himachal Pradesh Flood: ಹಿಮಾಚಲ ಪ್ರದೇಶದಲ್ಲಿ ಪ್ರವಾಹ; ರೌದ್ರಾವತಾರ ತಾಳಿದ ಬಿಯಾಸ್ ನದಿ

|

Updated on: Aug 01, 2024 | 5:31 PM

ಹಿಮಾಚಲ ಪ್ರದೇಶದ ಮಂಡಿಯಲ್ಲಿ ಭಾರೀ ಮಳೆಯಿಂದಾಗಿ ಬಿಯಾಸ್ ನದಿಯಲ್ಲಿ ನೀರಿನ ಮಟ್ಟ ಹೆಚ್ಚಾಗಿದೆ. ಬಿಯಾಸ್ ನದಿಯಲ್ಲಿ ಪ್ರವಾಹದಂತಹ ಪರಿಸ್ಥಿತಿ ಉಂಟಾಗಿದೆ. ಹಿಮಾಚಲ ಪ್ರದೇಶ ಸರ್ಕಾರವು ಇಂದು ಸಾರ್ವಜನಿಕರಿಗೆ ನದಿ ದಡದಿಂದ ದೂರವಿರಲು ಎಚ್ಚರಿಕೆಯನ್ನೂ ನೀಡಿದೆ.

ಹಿಮಾಚಲ ಪ್ರದೇಶದಲ್ಲಿ ಇಂದು ಭಾರೀ ಮಳೆ ಸುರಿಯುತ್ತಿರುವುದರಿಂದ ಬಿಯಾಸ್ ನದಿಯು ಉಕ್ಕಿ ಹರಿಯುತ್ತಿದೆ. ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಆಗಸ್ಟ್ 2ರವರೆಗೆ ಆರೆಂಜ್ ಅಲರ್ಟ್ ನೀಡಿರುವುದರಿಂದ ಹಿಮಾಚಲ ಪ್ರದೇಶದಲ್ಲಿ ಮಾನ್ಸೂನ್ ಚಟುವಟಿಕೆ ತೀವ್ರಗೊಳ್ಳುವ ಸಾಧ್ಯತೆಯಿದೆ. ಶಿಮ್ಲಾ ಜಿಲ್ಲೆಯ ರಾಮ್‌ಪುರ ವಿಭಾಗದಲ್ಲಿ ಮೇಘಸ್ಫೋಟ ಸಂಭವಿಸಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, 30ಕ್ಕೂ ಹೆಚ್ಚು ಮಂದಿ ಕಾಣೆಯಾಗಿದ್ದಾರೆ.

ಹಿಮಾಚಲ ಪ್ರದೇಶದ ಕುಲು, ಸೋಲನ್, ಸಿರ್ಮೌರ್, ಶಿಮ್ಲಾ ಮತ್ತು ಕಿನ್ನೌರ್ ಜಿಲ್ಲೆಗಳಲ್ಲಿ ದುರ್ಬಲ ಪ್ರದೇಶಗಳಲ್ಲಿ ಭೂಕುಸಿತಗಳು ಮತ್ತು ಪ್ರವಾಹದ ಬಗ್ಗೆ IMD ಎಚ್ಚರಿಕೆ ನೀಡಿತ್ತು. ತಗ್ಗು ಪ್ರದೇಶಗಳಲ್ಲಿನ ಕಚ್ಚಾ ಮನೆಗಳು ಮತ್ತು ತೋಟಗಳಿಗೆ ಬಲವಾದ ಗಾಳಿ ಮತ್ತು ನೀರಿನಿಂದ ಉಂಟಾಗುವ ಹಾನಿಯ ಬಗ್ಗೆ ಎಚ್ಚರಿಕೆ ನೀಡಲಾಗಿದೆ. ಕುಲುವಿನಲ್ಲಿ ಉಕ್ಕಿ ಹರಿಯುತ್ತಿರುವ ಪಾರ್ವತಿ ನದಿಯಲ್ಲಿ ಕಟ್ಟಡವೊಂದು ಕುಸಿದು ಕೊಚ್ಚಿ ಹೋಗಿದೆ.

ಇನ್ನಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ