ಚಾಮುಂಡಿ ಬೆಟ್ಟದಲ್ಲಿ ವರ್ಧಂತಿ ಸಂಭ್ರಮ ಸಡಗರ, ವಿಡಿಯೋನಲ್ಲಿ ನೋಡಿ ಚಾಮುಂಡೇಶ್ವರಿಯ ವಿಶೇಷ ಅಲಂಕಾರ
ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ (Mysuru Chamundi Hills) ಸಡಗರ ಸಂಭ್ರಮ ಮನೆ ಮಾಡಿದೆ. ಇಂದು ನಸುಕಿನ ವೇಳೆಯಿಂದಲೇ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಕೈಂಕರ್ಯ ನಡೆಯುತ್ತಿದ್ದು, ತಾಯಿ ಚಾಮುಂಡೇಶ್ವರಿ ಲಕ್ಷ್ಮೀ ಅಲಂಕಾರದಿಂದ ಕಂಗೊಳಿಸುತ್ತಿದ್ದಾಳೆ. ಇದ್ದಲ್ಲೇ ನೀವು ಕಣ್ತುಂಬಿಕೊಳ್ಳಿ.
ಮೈಸೂರು : ಆಷಾಢ ಮಾಸದ ಮೊದಲ ಶುಕ್ರವಾರ Ashada Friday) ನಾಡದೇವತೆ ಚಾಮುಂಡೇಶ್ವರಿ(chamundeshwari) ವರ್ಧಂತಿ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ನಗರಿ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ (Mysuru Chamundi Hills) ಸಡಗರ ಸಂಭ್ರಮ ಮನೆ ಮಾಡಿದೆ. ಇಂದು ನಸುಕಿನ ವೇಳೆಯಿಂದಲೇ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಕೈಂಕರ್ಯ ನಡೆಯುತ್ತಿದ್ದು, ತಾಯಿ ಚಾಮುಂಡೇಶ್ವರಿ ಲಕ್ಷ್ಮೀ ಅಲಂಕಾರದಿಂದ ಕಂಗೊಳಿಸುತ್ತಿದ್ದಾಳೆ. ದೇವಾಲಯದ ಆವರಣದಲ್ಲಿ ವಿವಿಧ ಹೂ ಹಾಗೂ ಹಣ್ಣುಗಳಿಂದ ಅಲಂಕಾರಿಸಲಾಗಿದೆ. ಚಾಮುಂಡೇಶ್ವರಿಗೆ ರುದ್ರಾಭಿಷೇಕ, ಪಂಚಾಮೃತ ಅಭಿಷೇಕ, ಕುಂಕುಮಾರ್ಚನೆ ಮಹಾಮಂಗಳಾರತಿ ನಡೆದಿದ್ದು, 65 ವರ್ಷ ಮೇಲ್ಪಟ್ಟವರಿಗೆ 50 ರೂ ಟಿಕೆಟ್ ಲೈನ್ ನಲ್ಲಿ ನೇರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
Published on: Jun 23, 2023 08:30 AM
Latest Videos