ಚಾಮುಂಡಿ ಬೆಟ್ಟದಲ್ಲಿ ವರ್ಧಂತಿ ಸಂಭ್ರಮ ಸಡಗರ, ವಿಡಿಯೋನಲ್ಲಿ ನೋಡಿ ಚಾಮುಂಡೇಶ್ವರಿಯ ವಿಶೇಷ ಅಲಂಕಾರ

Updated on: Jun 23, 2023 | 9:12 AM

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ (Mysuru Chamundi Hills) ಸಡಗರ ಸಂಭ್ರಮ ಮನೆ ಮಾಡಿದೆ. ಇಂದು ನಸುಕಿನ ವೇಳೆಯಿಂದಲೇ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಕೈಂಕರ್ಯ ನಡೆಯುತ್ತಿದ್ದು, ತಾಯಿ ಚಾಮುಂಡೇಶ್ವರಿ ಲಕ್ಷ್ಮೀ ಅಲಂಕಾರದಿಂದ ಕಂಗೊಳಿಸುತ್ತಿದ್ದಾಳೆ. ಇದ್ದಲ್ಲೇ ನೀವು ಕಣ್ತುಂಬಿಕೊಳ್ಳಿ.

ಮೈಸೂರು : ಆಷಾಢ ಮಾಸದ ಮೊದಲ ಶುಕ್ರವಾರ  Ashada Friday) ನಾಡದೇವತೆ ಚಾಮುಂಡೇಶ್ವರಿ(chamundeshwari) ವರ್ಧಂತಿ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ನಗರಿ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ (Mysuru Chamundi Hills) ಸಡಗರ ಸಂಭ್ರಮ ಮನೆ ಮಾಡಿದೆ. ಇಂದು ನಸುಕಿನ ವೇಳೆಯಿಂದಲೇ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಕೈಂಕರ್ಯ ನಡೆಯುತ್ತಿದ್ದು, ತಾಯಿ ಚಾಮುಂಡೇಶ್ವರಿ ಲಕ್ಷ್ಮೀ ಅಲಂಕಾರದಿಂದ ಕಂಗೊಳಿಸುತ್ತಿದ್ದಾಳೆ. ದೇವಾಲಯದ ಆವರಣದಲ್ಲಿ ವಿವಿಧ ಹೂ ಹಾಗೂ ಹಣ್ಣುಗಳಿಂದ ಅಲಂಕಾರಿಸಲಾಗಿದೆ. ಚಾಮುಂಡೇಶ್ವರಿಗೆ ರುದ್ರಾಭಿಷೇಕ, ಪಂಚಾಮೃತ ಅಭಿಷೇಕ, ಕುಂಕುಮಾರ್ಚನೆ ಮಹಾಮಂಗಳಾರತಿ ನಡೆದಿದ್ದು, 65 ವರ್ಷ ಮೇಲ್ಪಟ್ಟವರಿಗೆ 50 ರೂ ಟಿಕೆಟ್ ಲೈನ್ ನಲ್ಲಿ ನೇರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

Published on: Jun 23, 2023 08:30 AM
Follow Us
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More