ವಿಮಾನದೊಳಗೆ ಪ್ರಯಾಣಿಕರ ಚೀರಾಟ, ಕಣ್ಣೀರು: ಸಾವಿನ ದರ್ಶನ ಮಾಡಿಸಿದ FLY91 ವಿಮಾನ

Updated on: Apr 20, 2026 | 11:34 AM

ಹೈದರಾಬಾದ್‌ನಿಂದ ಹುಬ್ಬಳ್ಳಿಗೆ ಹೊರಟಿದ್ದ FLY91 ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿತ್ತು. ಸುಮಾರು ನಾಲ್ಕು ಗಂಟೆಗಳ ಕಾಲ ಆಕಾಶದಲ್ಲಿ ಸುತ್ತಾಡಿದ ವಿಮಾನದಲ್ಲಿ ಪ್ರಯಾಣಿಕರು ತೀವ್ರ ಆತಂಕಕ್ಕೆ ಒಳಗಾಗಿದ್ದರು, ಹಲವರು ಕಣ್ಣೀರು ಹಾಕಿದರು. ನಂತರ ವಿಮಾನವನ್ನು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಯಶಸ್ವಿಯಾಗಿ ತಿರುಗಿಸಲಾಯಿತು, ಅಲ್ಲಿ ಎಲ್ಲರೂ ಸುರಕ್ಷಿತವಾಗಿ ಇಳಿದಿದ್ದಾರೆ.

ಬೆಂಗಳೂರು, ಏ.20: ಹೈದರಾಬಾದ್‌ನಿಂದ ಹುಬ್ಬಳ್ಳಿಗೆ ತೆರಳುತ್ತಿದ್ದ FLY91 ವಿಮಾನ (ATR ಟರ್ಬೊಪ್ರಾಪ್ AT7) ಮಧ್ಯಮಾರ್ಗದಲ್ಲಿ ಹವಾಮಾನ ವೈಪರೀತ್ಯ ಉಂಟಾಗಿತ್ತು. ಈ ಘಟನೆಯಿಂದಾಗಿ ವಿಮಾನದಲ್ಲಿದ್ದ ಪ್ರಯಾಣಿಕರು ತೀವ್ರ ಆತಂಕಕ್ಕೆ ಒಳಗಾದರು. ಹಲವು ಪ್ರಯಾಣಿಕರು ಭಯದಿಂದ ಅಳುತ್ತಿದ್ದು, ಜೀವ ಕೈಯಲ್ಲಿ ಹಿಡಿದುಕೊಂಡು ಕುಳಿತಿದ್ದರು.ಈ ಬಗ್ಗೆ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ಸುಮಾರು ನಾಲ್ಕು ಗಂಟೆಗಳ ಕಾಲ ವಿಮಾನ ಆಕಾಶದಲ್ಲಿ ಸುತ್ತಾಡಿ, ಲ್ಯಾಂಡಿಂಗ್‌ಗಾಗಿ ಸೂಕ್ತ ಸ್ಥಳವನ್ನು ಹುಡುಕುತ್ತಿತ್ತು. ವಿಮಾನ ಸಿಬ್ಬಂದಿ ಮತ್ತು ಪೈಲಟ್‌ಗಳು ಪ್ರಯಾಣಿಕರನ್ನು ಸಮಾಧಾನಪಡಿಸಲು ಪ್ರಯತ್ನಿಸಿದರು, ಸುರಕ್ಷತೆಯು ಪ್ರಮುಖ ಆದ್ಯತೆ ಎಂದು ಭರವಸೆ ನೀಡಿದರು. ಹವಾಮಾನ ಪರಿಸ್ಥಿತಿಗಳು ಮತ್ತು ಲಭ್ಯವಿರುವ ಇಂಧನದ ಬಗ್ಗೆಯೂ ಮಾಹಿತಿ ನೀಡಿದರು. ವಿಮಾನವು ಇನ್ನೂ 30 ರಿಂದ 45 ನಿಮಿಷಗಳ ಹಾರಾಟ ಸಾಮರ್ಥ್ಯವನ್ನು ಹೊಂದಿದೆ ಎಂದು ತಿಳಿಸಲಾಗಿತ್ತು. ಸಕಾಲಿಕ ನಿರ್ಧಾರದ ನಂತರ, ವಿಮಾನವನ್ನು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಿರುಗಿಸಲಾಯಿತು. ಅಲ್ಲಿ ವಿಮಾನ ಸುರಕ್ಷಿತವಾಗಿ ಲ್ಯಾಂಡ್ ಆಯಿತು. ಈ ಘಟನೆಯಿಂದ ಪ್ರಯಾಣಿಕರು ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದರೂ, ಅಂತಿಮವಾಗಿ ಎಲ್ಲರೂ ಸುರಕ್ಷಿತವಾಗಿ ನೆಲವನ್ನು ತಲುಪಿ ನಿಟ್ಟುಸಿರು ಬಿಟ್ಟರು.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Apr 20, 2026 10:56 AM
Follow Us
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More