ಬೆಂಗಳೂರಿನಲ್ಲಿ ಹಿಂದಿ ಮಾತನಾಡದ್ದಕ್ಕೆ ಡೆಲಿವರಿ ಬಾಯ್ ಮೇಲೆ ಹಲ್ಲೆ!
ನಗರದಲ್ಲಿ ಭಾಷಾ ವಿವಾದಕ್ಕೆ ಸಂಬಂಧಿಸಿದಂತೆ ಭೀಕರ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ನಗರದ ಯಲಹಂಕ ನ್ಯೂ ಟೌನ್‌ನಲ್ಲಿ ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಹಿಂದಿ ಭಾಷೆ ಮಾತನಾಡಲಿಲ್ಲ ಎಂಬ ಕಾರಣಕ್ಕೆ ಸ್ಥಳೀಯ ಫುಡ್ ಡೆಲಿವರಿ ಬಾಯ್ ಮೇಲೆ ಅನ್ಯ ರಾಜ್ಯದ ಮೂಲದವರು ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾರೆ. ಒಬ್ಬ ಯುವತಿ ಹಾಗೂ ಇಬ್ಬರು ಯುವಕರು ಸೇರಿ ನಡುರಸ್ತೆಯಲ್ಲೇ ಇಂಧನ ಪೂರೈಸಲು ಬಂದಿದ್ದ ಡೆಲಿವರಿ ಬಾಯ್ ಮುಖಕ್ಕೆ ತೀವ್ರವಾಗಿ ಪಂಚ್ ಮಾಡಿ ರಕ್ತಸ್ರಾವ ಗೊಳಿಸಿದ್ದಾರೆ. ಈ ಅಮಾನವೀಯ ಘಟನೆಯ ಸಂಪೂರ್ಣ ದೃಶ್ಯಗಳು ಸ್ಥಳೀಯ ಸಿಸಿಟಿವಿ (CCTV) ಕ್ಯಾಮೆರಾದಲ್ಲಿ ಸೆರೆಯಾಗಿವೆ. ಸದ್ಯ ಹಲ್ಲೆಗೊಳಗಾದ ಯುವಕ ನೀಡಿದ ದೂರಿನ ಮೇರೆಗೆ ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ಬೆಂಗಳೂರು, ಆಗಸ್ಟ್ 08: ನಗರದಲ್ಲಿ ಭಾಷಾ ವಿವಾದಕ್ಕೆ ಸಂಬಂಧಿಸಿದಂತೆ ಭೀಕರ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ನಗರದ ಯಲಹಂಕ ನ್ಯೂ ಟೌನ್‌ನಲ್ಲಿ ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಹಿಂದಿ ಭಾಷೆ ಮಾತನಾಡಲಿಲ್ಲ ಎಂಬ ಕಾರಣಕ್ಕೆ ಸ್ಥಳೀಯ ಫುಡ್ ಡೆಲಿವರಿ ಬಾಯ್ ಮೇಲೆ ಅನ್ಯ ರಾಜ್ಯದ ಮೂಲದವರು ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾರೆ. ಒಬ್ಬ ಯುವತಿ ಹಾಗೂ ಇಬ್ಬರು ಯುವಕರು ಸೇರಿ ನಡುರಸ್ತೆಯಲ್ಲೇ ಡೆಲಿವರಿ ಬಾಯ್ ಮುಖಕ್ಕೆ ತೀವ್ರವಾಗಿ ಪಂಚ್ ಮಾಡಿದ್ದಾರೆ. ಈ ಅಮಾನವೀಯ ಘಟನೆಯ ಸಂಪೂರ್ಣ ದೃಶ್ಯಗಳು ಸ್ಥಳೀಯ ಸಿಸಿಟಿವಿ (CCTV) ಕ್ಯಾಮೆರಾದಲ್ಲಿ ಸೆರೆಯಾಗಿವೆ. ಸದ್ಯ ಹಲ್ಲೆಗೊಳಗಾದ ಯುವಕ ನೀಡಿದ ದೂರಿನ ಮೇರೆಗೆ ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

