ಬೆಂಗಳೂರಿನಲ್ಲಿ ಹಿಂದಿ ಮಾತನಾಡದ್ದಕ್ಕೆ ಡೆಲಿವರಿ ಬಾಯ್ ಮೇಲೆ ಹಲ್ಲೆ!

Edited By:

Updated on: Aug 08, 2026 | 1:29 PM

ನಗರದಲ್ಲಿ ಭಾಷಾ ವಿವಾದಕ್ಕೆ ಸಂಬಂಧಿಸಿದಂತೆ ಭೀಕರ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ನಗರದ ಯಲಹಂಕ ನ್ಯೂ ಟೌನ್‌ನಲ್ಲಿ ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಹಿಂದಿ ಭಾಷೆ ಮಾತನಾಡಲಿಲ್ಲ ಎಂಬ ಕಾರಣಕ್ಕೆ ಸ್ಥಳೀಯ ಫುಡ್ ಡೆಲಿವರಿ ಬಾಯ್ ಮೇಲೆ ಅನ್ಯ ರಾಜ್ಯದ ಮೂಲದವರು ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾರೆ. ಒಬ್ಬ ಯುವತಿ ಹಾಗೂ ಇಬ್ಬರು ಯುವಕರು ಸೇರಿ ನಡುರಸ್ತೆಯಲ್ಲೇ ಇಂಧನ ಪೂರೈಸಲು ಬಂದಿದ್ದ ಡೆಲಿವರಿ ಬಾಯ್ ಮುಖಕ್ಕೆ ತೀವ್ರವಾಗಿ ಪಂಚ್ ಮಾಡಿ ರಕ್ತಸ್ರಾವ ಗೊಳಿಸಿದ್ದಾರೆ. ಈ ಅಮಾನವೀಯ ಘಟನೆಯ ಸಂಪೂರ್ಣ ದೃಶ್ಯಗಳು ಸ್ಥಳೀಯ ಸಿಸಿಟಿವಿ (CCTV) ಕ್ಯಾಮೆರಾದಲ್ಲಿ ಸೆರೆಯಾಗಿವೆ. ಸದ್ಯ ಹಲ್ಲೆಗೊಳಗಾದ ಯುವಕ ನೀಡಿದ ದೂರಿನ ಮೇರೆಗೆ ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಬೆಂಗಳೂರು, ಆಗಸ್ಟ್ 08: ನಗರದಲ್ಲಿ ಭಾಷಾ ವಿವಾದಕ್ಕೆ ಸಂಬಂಧಿಸಿದಂತೆ ಭೀಕರ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ನಗರದ ಯಲಹಂಕ ನ್ಯೂ ಟೌನ್‌ನಲ್ಲಿ ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಹಿಂದಿ ಭಾಷೆ ಮಾತನಾಡಲಿಲ್ಲ ಎಂಬ ಕಾರಣಕ್ಕೆ ಸ್ಥಳೀಯ ಫುಡ್ ಡೆಲಿವರಿ ಬಾಯ್ ಮೇಲೆ ಅನ್ಯ ರಾಜ್ಯದ ಮೂಲದವರು ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾರೆ. ಒಬ್ಬ ಯುವತಿ ಹಾಗೂ ಇಬ್ಬರು ಯುವಕರು ಸೇರಿ ನಡುರಸ್ತೆಯಲ್ಲೇ ಡೆಲಿವರಿ ಬಾಯ್ ಮುಖಕ್ಕೆ ತೀವ್ರವಾಗಿ ಪಂಚ್ ಮಾಡಿದ್ದಾರೆ. ಈ ಅಮಾನವೀಯ ಘಟನೆಯ ಸಂಪೂರ್ಣ ದೃಶ್ಯಗಳು ಸ್ಥಳೀಯ ಸಿಸಿಟಿವಿ (CCTV) ಕ್ಯಾಮೆರಾದಲ್ಲಿ ಸೆರೆಯಾಗಿವೆ. ಸದ್ಯ ಹಲ್ಲೆಗೊಳಗಾದ ಯುವಕ ನೀಡಿದ ದೂರಿನ ಮೇರೆಗೆ ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Aug 08, 2026 01:28 PM
Loading...
Unable to load recommendations.
Follow Us
ಶಿವಪ್ರಸಾದ್​ ಬಿ.

2015 ರಲ್ಲಿ ಸಮಯ ವಾಹಿನಿ ಮೂಲಕ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ವರದಿಗಾರನಾಗಿ ವೃತ್ತಿ ಆರಂಭಿಸಿದೆ. ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಹಿರಿಯ ಕ್ರೈಮ್ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ . ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿಗಳನ್ನು ಮಾಡುತ್ತಿದ್ದೇನೆ. ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನವನಾಗಿದ್ದು, ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಎಂಎಸ್ (ಕಮ್ಯೂನಿಕೇಷನ್) ಸ್ನಾತಕೋತ್ತರ ಪದವಿ ಹಾಗೂ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ ಕಾನೂನು ಪದವೀಧರನಾಗಿದ್ದೇನೆ.

Read More