ಅಬ್ದುಲ್ ರಜಾಕ್ ಬಳಿ ಮಾಂಸ ಮಾರಾಟ ಲೈಸೆನ್ಸ್ ಇಲ್ಲ-ಆಹಾರ ಇಲಾಖೆ ಆಯುಕ್ತ ಶ್ರೀನಿವಾಸ್
ಬೆಂಗಳೂರಿಗೆ ನಾಯಿ (dog) ಮಾಂಸ ಸಾಗಾಟ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರೀ ಚರ್ಚೆಗೆ ಗ್ರಾಸವಾಗುತ್ತಿದೆ. ಈ ಕುರಿತು ಆಹಾರ ಇಲಾಖೆ ಆಯುಕ್ತ ಶ್ರೀನಿವಾಸ್ ಮಾತನಾಡಿ, ‘ಮುಸ್ಲಿಂ ಮುಖಂಡ ಅಬ್ದುಲ್ ರಜಾಕ್ (Abdul Razack) ಬಳಿ ಮಾಂಸ ಮಾರಾಟ ಲೈಸೆನ್ಸ್ ಇಲ್ಲ ಎಂದು ಹೇಳಿದ್ದಾರೆ.
ಬೆಂಗಳೂರು, ಜು.27: ಬೇರೆ ರಾಜ್ಯದಿಂದ ಬೆಂಗಳೂರಿಗೆ ನಾಯಿ (d0g) ಮಾಂಸ ಸಾಗಾಟ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಸ್ಲಿಂ ಮುಖಂಡ ಅಬ್ದುಲ್ ರಜಾಕ್ (Abdul Razack) ಬಳಿ ಮಾಂಸ ಮಾರಾಟ ಲೈಸೆನ್ಸ್ ಇಲ್ಲ ಎಂದು ಆಹಾರ ಇಲಾಖೆ ಆಯುಕ್ತ ಶ್ರೀನಿವಾಸ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ‘ಲೈಸೆನ್ಸ್ ಇಲ್ಲದ ಹಿನ್ನಲೆ ಅವರಿಗೆ ಯಾವುದೇ ನೋಟಿಸ್ ಕೊಟ್ಟಿಲ್ಲ. ಸದ್ಯ 12 ಜನರಿಗೆ ಮಾಂಸ ಮಾರಾಟದ ಲೈಸೆನ್ಸ್ ಕೊಟ್ಟಿದ್ದೇವೆ. ಅವರನ್ನ ಭೇಟಿ ನೀಡಿ ಮಾಹಿತಿ ನೀಡೋಕೆ ಹೇಳಿದ್ದೇವೆ. ಒಂದು ವೇಳೆ ಇಂದು ಆ 12 ಜನ ಹಾಜರಾಗದಿದ್ರೆ ನೋಟಿಸ್ ಕೊಡುತ್ತೇವೆ. ಸದ್ಯ ಮೇಲ್ನೋಟಕ್ಕೆ ನಾಯಿ ಮಾಂಸ ಎಂದು ಕಂಡುಬಂದಿಲ್ಲ. ಸ್ಯಾಂಪಲ್ಗಳನ್ನ ಲ್ಯಾಬ್ಗೆ ಕಳಿಸಿದ್ದೇವೆ. ರಿಪೋರ್ಟ್ ಬಂದ ಮೇಲೆ ಖಂಡಿತ ಕ್ರಮ ಆಗುತ್ತದೆ ಎಂದಿದ್ದಾರೆ.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Loading...
Unable to load recommendations.
Follow Us