ಸಿಹಿತಿಂಡಿ ತಯಾರಿಕಾ ಘಟಕಗಳ ಮೇಲೆ ಆಹಾರ ಇಲಾಖೆ ದಾಳಿ: ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!

Edited By:

Updated on: Sep 02, 2026 | 11:47 AM

ಆರೋಗ್ಯ ಸಚಿವ ಯುಟಿ ಖಾದರ್, ಸಿಹಿತಿಂಡಿ ತಯಾರಿಕಾ ಘಟಕಗಳ ಮೇಲಿನ ದಾಳಿ, ಎರಡು ಘಟಕಗಳ ಬಂದ್ ಮತ್ತು ಶೋಕಾಸ್ ನೋಟಿಸ್ ಬಗ್ಗೆ ಮಾಹಿತಿ ನೀಡಿದ್ದಾರೆ. ಬೆಂಗಳೂರು ಮಾತ್ರವಲ್ಲದೆ ಮಂಗಳೂರು, ಹುಬ್ಬಳ್ಳಿ ಸೇರಿದಂತೆ ರಾಜ್ಯಾದ್ಯಂತ ತಪಾಸಣೆ ತೀವ್ರಗೊಳಿಸಲಾಗುವುದು ಎಂದರು. ಆಹಾರ ಗುಣಮಟ್ಟ, ಶುಚಿತ್ವಕ್ಕೆ ಆದ್ಯತೆ ನೀಡುವಂತೆ ಸೂಚಿಸಿದ ಅವರು, ಗ್ರಾಹಕರ ದೂರುಗಳಿಗಾಗಿ ಕ್ಯೂಆರ್ ಕೋಡ್ ವ್ಯವಸ್ಥೆ ಜನಪ್ರಿಯಗೊಳಿಸಲಾಗುವುದು ಎಂದು ತಿಳಿಸಿದರು.

ಮಂಗಳೂರು, ಸೆಪ್ಟೆಂಬರ್ 2: ಸಿಹಿತಿಂಡಿ ತಯಾರಿಕಾ ಘಟಕಗಳ ಮೇಲೆ ಆಹಾರ ಮತ್ತು ಸುರಕ್ಷತಾ ಇಲಾಖೆ ನಡೆಸಿದ ದಾಳಿ ಹಾಗೂ ಮುಂದಿನ ಕ್ರಮಗಳ ಬಗ್ಗೆ ಆರೋಗ್ಯ ಸಚಿವ ಯುಟಿ ಖಾದರ್ ಮಾಹಿತಿ ನೀಡಿದ್ದಾರೆ. ಇತ್ತೀಚೆಗೆ ನಡೆಸಿದ ತಪಾಸಣೆಯಲ್ಲಿ ಎರಡು ಸಿಹಿ ತಯಾರಿಕಾ ಘಟಕಗಳನ್ನು ಮುಚ್ಚಲಾಗಿದ್ದು, ಉಳಿದ ಘಟಕಗಳಿಗೆ ಶೋಕಾಸ್ ನೋಟಿಸ್ ಜಾರಿಗೊಳಿಸಲಾಗಿದೆ. ನೋಟಿಸ್‌ಗೆ ಉತ್ತರ ಬಂದ ನಂತರ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ತಪಾಸಣೆಗಳು ಬೆಂಗಳೂರಿಗೆ ಮಾತ್ರ ಸೀಮಿತವಾಗಿರುವುದಿಲ್ಲ. ಮಂಗಳೂರು, ಹುಬ್ಬಳ್ಳಿ, ಮೈಸೂರು, ಬೆಳಗಾವಿ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ತಪಾಸಣೆಯನ್ನು ತೀವ್ರಗೊಳಿಸುವ ಉದ್ದೇಶವಿದೆ. ಎಲ್ಲರೂ ಸ್ವಚ್ಛತೆ, ಗುಣಮಟ್ಟ ಮತ್ತು ಆಹಾರದ ಶುದ್ಧತೆಯನ್ನು ಕಾಯ್ದುಕೊಳ್ಳಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ. ದಾಳಿ ವೇಳೆ ಸಿಕ್ಕಿಬಿದ್ದ ನಂತರ ಕಾಪಾಡುವಂತೆ ಕೇಳಿಕೊಂಡರೆ ನನ್ನಿಂದ ನಯಾಪೈಸೆ ಉಪಕಾರ ಸಿಗಲ್ಲ. ಆಹಾರ ತಿನ್ನುವವರ ಆರೋಗ್ಯವೇ ನಮಗೆ ಮುಖ್ಯ ಎಂದು ಅವರು ಹೇಳಿದರು.

ಯಾವುದೇ ರೀತಿಯ ಕಲಬೆರಕೆ ಇಲ್ಲದೆ ಉತ್ತಮ ಆಹಾರ ಒದಗಿಸುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದರು. ಗ್ರಾಹಕರ ದೂರುಗಳಿಗಾಗಿ ಕ್ಯೂಆರ್ ಕೋಡ್ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದ್ದು, ಇದರಿಂದ ಸಮಸ್ಯೆಗಳನ್ನು ಅಧಿಕಾರಿಗಳಿಗೆ ನೇರವಾಗಿ ವರದಿ ಮಾಡಲು ಸಾಧ್ಯವಾಗುತ್ತದೆ. ಪಿಜಿ ಮಾಲೀಕರು ಮತ್ತು ಕ್ಯಾಟರಿಂಗ್ ಸೇವೆ ಒದಗಿಸುವವರು ಸಹ ಉತ್ತಮ ಗುಣಮಟ್ಟದ ಆಹಾರವನ್ನು ಒದಗಿಸುವಂತೆ ಸಚಿವರು ಮನವಿ ಮಾಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಪೃಥ್ವಿರಾಜ್​ ಬಿ.ಯು. ಮಂಗಳೂರು

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More