AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಸತಿ ಶಾಲೆಯ ಆಹಾರ ಸೇವಿಸಿ 50ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ವಾಂತಿ ಭೇದಿ, ಆಸ್ಪತ್ರೆಗೆ ದಾಖಲು!

ವಸತಿ ಶಾಲೆಯ ಆಹಾರ ಸೇವಿಸಿ 50ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ವಾಂತಿ ಭೇದಿ, ಆಸ್ಪತ್ರೆಗೆ ದಾಖಲು!

Basavaraj Yaraganavi
| Edited By: |

Updated on: Jul 25, 2026 | 2:12 PM

Share

ತೀರ್ಥಹಳ್ಳಿ ತಾಲೂಕಿನ ಕೋಣಂದೂರಿನ ನ್ಯಾಷನಲ್ ರೆಸಿಡೆನ್ಸಿ ವಸತಿ ಶಾಲೆಯಲ್ಲಿ ಕಲುಷಿತ ಆಹಾರ ಸೇವಿಸಿ ಸುಮಾರು 50ರಿಂದ 70 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ. ವಸತಿ ಶಾಲೆಯಲ್ಲಿ ರಾತ್ರಿ ಅವಲಕ್ಕಿ ಹಾಗೂ ದಾಲ್ ಚಪಾತಿ ತಿಂದಿದ್ದ ವಿದ್ಯಾರ್ಥಿಗಳಲ್ಲಿ ದಿಢೀರ್ ವಾಂತಿ-ಭೇದಿ ಕಾಣಿಸಿಕೊಂಡು ಆರೋಗ್ಯ ಏರುಪೇರಾಗಿತ್ತು. ತಕ್ಷಣವೇ ಅಸ್ವಸ್ಥ ಮಕ್ಕಳನ್ನು ಕೋಣಂದೂರು ಸರ್ಕಾರಿ ಆಸ್ಪತ್ರೆ ಹಾಗೂ ತೀರ್ಥಹಳ್ಳಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು.

ಶಿವಮೊಗ್ಗ: ತೀರ್ಥಹಳ್ಳಿ ತಾಲೂಕಿನ ಕೋಣಂದೂರಿನ ನ್ಯಾಷನಲ್ ರೆಸಿಡೆನ್ಸಿ ವಸತಿ ಶಾಲೆಯಲ್ಲಿ ಕಲುಷಿತ ಆಹಾರ ಸೇವಿಸಿ ಸುಮಾರು 50ರಿಂದ 70 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ. ವಸತಿ ಶಾಲೆಯಲ್ಲಿ ರಾತ್ರಿ ಅವಲಕ್ಕಿ ಹಾಗೂ ದಾಲ್ ಚಪಾತಿ ತಿಂದಿದ್ದ ವಿದ್ಯಾರ್ಥಿಗಳಲ್ಲಿ ದಿಢೀರ್ ವಾಂತಿ-ಭೇದಿ ಕಾಣಿಸಿಕೊಂಡು ಆರೋಗ್ಯ ಏರುಪೇರಾಗಿತ್ತು. ತಕ್ಷಣವೇ ಅಸ್ವಸ್ಥ ಮಕ್ಕಳನ್ನು ಕೋಣಂದೂರು ಸರ್ಕಾರಿ ಆಸ್ಪತ್ರೆ ಹಾಗೂ ತೀರ್ಥಹಳ್ಳಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು.

ಈ ಪೈಕಿ ತೀವ್ರ ಅಸ್ವಸ್ಥಗೊಂಡಿದ್ದ 11 ವಿದ್ಯಾರ್ಥಿಗಳನ್ನು ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಘಟನೆಯಿಂದ ಪೋಷಕರು ತೀವ್ರ ಆತಂಕಗೊಂಡಿದ್ದು, ವಸತಿ ಶಾಲೆಯ ನೈರ್ಮಲ್ಯದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದ್ಯ ಹಂತ ಹಂತವಾಗಿ ಕೆಲವು ವಿದ್ಯಾರ್ಥಿಗಳು ಗುಣಮುಖರಾಗುತ್ತಿದ್ದು, ಚಿಕಿತ್ಸೆ ಮುಂದುವರಿದಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us