AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Assembly Polls: ಪ್ರಧಾನಿ ನರೇಂದ್ರ ಮೋದಿ ಬೆಂಗಳೂರು ರೋಡ್ ಶೋಗೆ ಬಿಗಿ ಪೊಲೀಸ್ ಬಂದೋಬಸ್ತ್, ಹಲವು ರಸ್ತೆಗಳು ಬ್ಲಾಕ್

Karnataka Assembly Polls: ಪ್ರಧಾನಿ ನರೇಂದ್ರ ಮೋದಿ ಬೆಂಗಳೂರು ರೋಡ್ ಶೋಗೆ ಬಿಗಿ ಪೊಲೀಸ್ ಬಂದೋಬಸ್ತ್, ಹಲವು ರಸ್ತೆಗಳು ಬ್ಲಾಕ್

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Apr 29, 2023 | 10:29 AM

Share

5 ಡಿಸಿಪಿ, 20 ಎಸಿಪಿ, 64 ಇನ್ಸ್ ಪೆಕ್ಟರ್, 180 ಮಹಿಳಾ ಪಿಎಸ್ ಐ ಮತ್ತು 10 ಕೆಎಸ್ ಆರ್ ಪಿ ತುಕುಡಿ ಸೇರಿದಂತೆ ಒಟ್ಟು 3 ಸಾವಿರ ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ.

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದಿನಿಂದ ಸುಮಾರು ಹತ್ತು ದಿನಗಳ ಕಾಲ ಕರ್ನಾಟಕದ ನಾನಾ ಭಾಗಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಅವರು ಈಗಾಗಲೇ ಬೀದರ್​ ಗೆ ಆಗಮಿಸಿದ್ದು ಮಧ್ಯಾಹ್ನದ ನಂತರ ಬೆಂಗಳೂರಲ್ಲಿ ಬಂದಿಳಿಯಲಿದ್ದಾರೆ. ನಗರದಲ್ಲಿ  ಪ್ರಧಾನಿಯವರು ಸಂಜೆ ನೈಸ್ ರೋಡ್ ಜಂಕ್ಷನ್ ನಿಂದ (NICE road junction) ಸುಮನಹಳ್ಳಿ ಜಂಕ್ಷನ್ ವರೆಗೆ ರೋಡ್ ಶೋ ನಡೆಸಲಿರುವುದರಿಂದ ಆ ಸ್ಥಳಗಳಲ್ಲಿ ಬಿಗಿ ಪೊಲೀಸ್ ಭದ್ರತೆ (police security) ಈಗಿಂದಲೇ ನಿಯೋಜಿಸಲಾಗಿದೆ. ಟಿವಿ9 ಕನ್ನಡ ವಾಹಿನಿಯ ಬೆಂಗಳೂರು ವರದಿಗಾರ ವಾಕ್ ಥ್ರೂನಲ್ಲಿ ಹೇಳುವ ಹಾಗೆ 5 ಡಿಸಿಪಿ, 20 ಎಸಿಪಿ, 64 ಇನ್ಸ್ ಪೆಕ್ಟರ್, 180 ಮಹಿಳಾ ಪಿಎಸ್ ಐ ಮತ್ತು 10 ಕೆಎಸ್ ಆರ್ ಪಿ ತುಕುಡಿ ಸೇರಿದಂತೆ ಒಟ್ಟು 3 ಸಾವಿರ ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.