ಯುಪಿ ಮುಖ್ಯಮಂತ್ರಿ ಆಗಮನದ ಹಿನ್ನೆಲೆ, ನೆಲಮಂಗಲದಲ್ಲಿ ಫೂಲ್ಪ್ರೂಫ್ ಪೊಲೀಸ್ ಭಧ್ರತೆ
ಕ್ಷೇಮವನದ ಉದ್ಘಾಟನೆಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಫೂಲ್ ಪ್ರೂಫ್ ಪೊಲೀಸ್ ಭದ್ರತೆಯನ್ನು ರಾಜ್ಯ ಸರ್ಕಾರ ನೆಲಮಂಗಲದಲ್ಲಿ ಏರ್ಪಾಟು ಮಾಡಿದೆ.
ನೆಲಮಂಗಲ: ಗುರುವಾರದಂದು ಬೆಂಗಳೂರಿಗೆ ಹತ್ತಿರದ ನೆಲಮಂಗಲದಲ್ಲಿ ಧರ್ಮಸ್ಥಳ ಶಿಕ್ಷಣ ಸಂಸ್ಥೆಯಿಂದ ನಿರ್ಮಾಣಗೊಂಡಿರುವ ಕ್ಷೇಮವನದ ಉದ್ಘಾಟನೆಗೆ ಉತ್ತರ ಪ್ರದೇಶದ (Uttar Pradesh) ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಫೂಲ್ ಪ್ರೂಫ್ ಪೊಲೀಸ್ ಭದ್ರತೆಯನ್ನು ರಾಜ್ಯ ಸರ್ಕಾರ ನೆಲಮಂಗಲದಲ್ಲಿ ಏರ್ಪಾಟು ಮಾಡಿರುವುದನ್ನು ವಿಡಿಯೋದಲ್ಲಿ ನೀವು ನೋಡಬಹುದು. ಸ್ಥಳದಲ್ಲಿ ಎರಡು ಹೆಲಿಪ್ಯಾಡ್ ಗಳನ್ನು ನಿರ್ಮಿಸಲಾಗಿದೆ.