ಉತ್ತರ ಪ್ರದೇಶದಲ್ಲಿ ರೈತರ ಮೇಲೆ ಕಾರು ಹರಿಸಿದ ದೃಶ್ಯ ಮೊಬೈಲ್ನಲ್ಲಿ ಸೆರೆ; ವಿಡಿಯೋ ನೋಡಿ
ಉಪಮುಖ್ಯಮಂತ್ರಿ ಕೇಶವ ಮೌರ್ಯ ಮತ್ತು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಭೇಟಿಗಾಗಿ ರೈತರು ಬೆಳಿಗ್ಗೆಯಿಂದ ಪ್ರತಿಭಟನೆ ನಡೆಸುತ್ತಿದ್ದರು.
ಉತ್ತರ ಪ್ರದೇಶದ ಲಖೀಂಪುರ ಖೇರಿಯಲ್ಲಿ ರೈತರ ಮೇಲೆ ಕಾರು ಹರಿಸಿದ ದೃಶ್ಯ ಮೊಬೈಲ್ನಲ್ಲಿ ಸೆರೆಯಾಗಿದೆ. ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ರೈತರ ಮೇಲೆ ಜೀಪ್ ಹತ್ತಿಸಲಾಗಿದೆ. ಬಳಿಕ ಕಾರ್ ಹರಿದು ಹೋಗಿದೆ. ಮೊದಲಿಗೆ ಜೀಪ್ ರೈತರ ಮೇಲೆ ಹರಿದಾಗಲೇ ರೈತರು ರಸ್ತೆಯಲ್ಲಿ ಬಿದ್ದು ಸಾವನ್ನಪ್ಪಿದ್ದಾರೆ. ಬಳಿಕ ತಕ್ಷಣವೇ ಕಾರ್ ಕೂಡ ಹೋಗಿದೆ. ಕೆಲವರು ರಸ್ತೆ ಪಕ್ಕಕ್ಕೆ ಜಂಪ್ ಮಾಡಿ ಜೀವ ಉಳಿಸಿಕೊಂಡಿದ್ದಾರೆ. ರೈತರ ಹಿಂಭಾಗದಿಂದ ಜೀಪ್, ಕಾರು ಬಂದಿರುವುದರಿಂದ ರೈತರಿಗೆ ಇದು ಗೊತ್ತಾಗಲಿಲ್ಲ. ಕೆಲವೇ ಕ್ಷಣಗಳಲ್ಲಿ ಈ ಘಟನೆ ನಡೆದು ಹೋಗಿದೆ. ಉಪಮುಖ್ಯಮಂತ್ರಿ ಕೇಶವ ಮೌರ್ಯ ಮತ್ತು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಭೇಟಿಗಾಗಿ ರೈತರು ಬೆಳಿಗ್ಗೆಯಿಂದ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಇಬ್ಬರು ರೈತರ ಮೇಲೆ ಸಚಿವರ ಬೆಂಗಾವಲು ವಾಹನ ಹರಿದು ಸಾವಿಗೀಡಾಗಿದ್ದರು.
Latest Videos