AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲ ಬಾರಿಗೆ ಪೊಲೀಸ್ ಅಧಿಕಾರಿಯೊಬ್ಬರ ಮಗಳು ಚಿನ್ನದ ಸ್ಮಗ್ಲಿಂಗ್​ನಲ್ಲಿ ಭಾಗಿಯಾಗಿದ್ದು ಬೆಳಕಿಗೆ ಬಂದಿದೆ: ವಿಜಯೇಂದ್ರ

ಮೊದಲ ಬಾರಿಗೆ ಪೊಲೀಸ್ ಅಧಿಕಾರಿಯೊಬ್ಬರ ಮಗಳು ಚಿನ್ನದ ಸ್ಮಗ್ಲಿಂಗ್​ನಲ್ಲಿ ಭಾಗಿಯಾಗಿದ್ದು ಬೆಳಕಿಗೆ ಬಂದಿದೆ: ವಿಜಯೇಂದ್ರ

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Mar 10, 2025 | 5:16 PM

Share

ರನ್ಯಾ ರಾವ್ ಪ್ರಕರಣವನ್ನು ಸಿಬಿಐ ತನಿಖೆ ಮಾಡುತ್ತಿದೆ ಮತ್ತು ಇದರಲ್ಲಿ ಶಾಮೀಲಾಗಿರುವ ಇಬ್ಬರು ಸಚಿವರ ಹೆಸರುಗಳನ್ನೂ ಬಯಲಿಗೆಳೆಯುತ್ತದೆ, ಆದರೆ ಮುಖ್ಯಮಂತ್ರಿಯವರಿಗೆ ಆ ಸಚಿವರು ಯಾರು ಅನ್ನೋದರ ಮಾಹಿತಿ ಲಭ್ಯವಾಗಿರುತ್ತದೆ, ಹಾಗಾಗಿ ತನಿಖಾ ಸಂಸ್ಥೆ ಸಚಿವರ ಹೆರುಗಳನ್ನು ಬಹಿರಂಗಪಡಿಸುವ ಮೊದಲು ಸಿಎಂ ಅವರೇ ಅದನ್ನು ಮಾಡಲಿ ಎನ್ನುವುದಷ್ಟೇ ತನ್ನ ಆಗ್ರಹ ಎಂದು ವಿಜಯೇಂದ್ರ ಹೇಳಿದರು.

ಬೆಂಗಳೂರು, ಮಾರ್ಚ್​ 10: ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ ಸದನದ ಹೊರಗೆ ಮತ್ತು ಒಳಗೆ-ಎರಡೂ ಕಡೆ ಸದ್ದು ಮಾಡುತ್ತಿದೆ. ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತಾಡಿದ ಬಿವೈ ವಿಜಯೇಂದ್ರ (BY Vijayendra) ಪ್ರಕರಣದಲ್ಲಿ ಹಿಂದೇನಾಗಿತ್ತು ಅನ್ನೋದನ್ನು ಸಿಬಿಯ ತನಿಖೆ ಮಾಡಲಿ, ಆದರೆ ಪ್ರಸ್ತುತ ಸ್ಥಿತಿಯ ಬಗ್ಗೆ ತಾನು ಯೋಚನೆ ಮಾಡುತ್ತಿದ್ದೇನೆ, ಹಿರಿಯ ಪೊಲೀಸ್ ಅಧಿಕಾರಿಯ ಮಗಳೊಬ್ಬಳು ಸುಮಾರು ₹14 ಕೋಟಿ ಮೌಲ್ಯದ ಕಳ್ಳಸಾಗಣೆಯಲ್ಲಿ ಭಾಗಿಯಾಗಿದ್ದು ಇದೇ ಮೊದಲ ಸಲ ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ನಟಿ ರನ್ಯಾ ರಾವ್ ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ನಲ್ಲಿ ಕರ್ನಾಟಕದ ಪ್ರಭಾವಿ ರಾಜಕಾರಣಿ ಹೆಸರು: ಯಾರವರು?

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.