Bengaluru News; ಬಜೆಟ್ ಮೇಲಿನ ಉತ್ತರವನ್ನು ಯಾವತ್ತೂ ವಿರೋಧಪಕ್ಷಗಳ ಸದಸ್ಯರಿಲ್ಲದ ಸದನಕ್ಕೆ ನೀಡಿರಲಿಲ್ಲ: ಸಿದ್ದರಾಮಯ್ಯ, ಮುಖ್ಯಮಂತ್ರಿ

ಅರುಣ್​ ಕುಮಾರ್​ ಬೆಳ್ಳಿ

Updated on: Jul 22, 2023 | 5:07 PM

ಚರ್ಚೆಗಳು ಫಲಪ್ರದವಾಗಿ ನಡೆಯಲಿ ಎಂಬ ಕಾರಣಕ್ಕಾಗೇ ಅಧಿವೇಶನವನ್ನು ಒಂದು ವಾರದ ಮಟ್ಟಿಗೆ ವಿಸ್ತರಿಸಲಾಯಿತು ಎಂದು ಸಿದ್ದರಾಮಯ್ಯ ಹೇಳಿದರು,

ಬೆಂಗಳೂರು: ರಾಜ್ಯ ಶ್ರೇಷ್ಠ ರಫ್ತು ಪ್ರಶಸ್ತಿಗಳ ಪ್ರದಾನ ಸಮಾರಂಭ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅಧಿವೇಶನ ನಡೆಯುವಾಗ ಬಿಜೆಪಿ ಶಾಸಕರು (BJP MLAs) ಸದನದ ಹೊರಗಡೆ ಪ್ರತಿಭಟನೆ ನಡೆಸಿದ್ದು ಸರಿಯಲ್ಲ ಎಂದು ಹೇಳಿದರು. ಅಧಿವೇಶನ ನಡೆಸುವ ಉದ್ದೇಶ ಜನರ ಸಮಸ್ಯೆಗಳನ್ನು ಚರ್ಚಿಸುವುದಕ್ಕಾಗಿ, ಅದನ್ನು ಬಿಟ್ಟು ಬಿಜೆಪಿ ಶಾಸಕರು ಹಗಲೆಲ್ಲ ಪ್ರತಿಭಟನೆ ನಡೆಸಿದರೆ, ಸದನದ ಆಶಯಗಳಿಗೆ ಚ್ಯುತಿಯಾಗುತ್ತದೆ ಎಂದು ಸಿದ್ದರಾಮಯ್ಯ ಹೇಳಿದರು. ಚರ್ಚೆಗಳು (debates) ಫಲಪ್ರದವಾಗಿ ನಡೆಯಲಿ ಎಂಬ ಕಾರಣಕ್ಕಾಗೇ ಅಧಿವೇಶನವನ್ನು ಒಂದು ವಾರದ ಮಟ್ಟಿಗೆ ವಿಸ್ತರಿಸಲಾಯಿತು. 40 ವರ್ಷಗಳ ತಮ್ಮ ರಾಜಕೀಯ ಬದುಕಿನಲ್ಲಿ ಯಾವತ್ತೂ ಹೀಗೆ ಆಗಿರಲಿಲ್ಲ. ಬಜೆಟ್ ಮೇಲಿನ ಉತ್ತರವನ್ನು ತಾವು ವಿರೋಧ ಪಕ್ಷಗಳ ಸದಸ್ಯರಿಲ್ಲದ ಸದನಕ್ಕೆ ಯಾವತ್ತೂ ನೀಡಿರಲಿಲ್ಲ, ಇದೇ ಮೊದಲ ಬಾರಿಗೆ ಹಾಗೆ ಆಗಿದ್ದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.