ಅ. 17ರ ವರೆಗೆ ಕರ್ನಾಟಕದ 18 ಜಿಲ್ಲೆಗಳಲ್ಲಿ ಭಾರೀ ಮಳೆ: ಯೆಲ್ಲೋ- ಆರೆಂಜ್ ಅಲರ್ಟ್ ಘೋಷಣೆ

ಅ. 17ರ ವರೆಗೆ ಕರ್ನಾಟಕದ 18 ಜಿಲ್ಲೆಗಳಲ್ಲಿ ಭಾರೀ ಮಳೆ: ಯೆಲ್ಲೋ- ಆರೆಂಜ್ ಅಲರ್ಟ್ ಘೋಷಣೆ

ರಮೇಶ್ ಬಿ. ಜವಳಗೇರಾ
|

Updated on: Oct 14, 2024 | 4:40 PM

ಮುಂದಿನ ದಿನಗಳಲ್ಲಿ ಕರ್ನಾಟಕದ 18 ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಜ್ಞ C.S.ಪಾಟೀಲ್‌ ಮಾಹಿತಿ ನೀಡಿದ್ದಾರೆ. ವಾಯುಭಾರ ಕುಸಿತ ಸಾಧ್ಯತೆ ಇರುವುದರಿಂದ ಅಕ್ಟೋಬರ್ 17ರವರೆಗೆ ಮಳೆಯಾಗಲಿದೆ ಎಂದು ತಿಳಿಸಿದ್ದಾರೆ. ಎಲ್ಲೆಲ್ಲಿ ಮಳೆ ಎನ್ನುವ ವಿವರ ಇಲ್ಲಿದೆ.

ಬೆಂಗಳೂರು, (ಅಕ್ಟೋಬರ್ 14): ಕರ್ನಾಟಕದ 18 ಜಿಲ್ಲೆಗಳಲ್ಲಿ ಅಕ್ಟೋಬರ್ 17ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಜ್ಞ C.S.ಪಾಟೀಲ್‌ ಮಾಹಿತಿ ನೀಡಿದ್ದಾರೆ. ಎರ್ಡ್ಮೂರು ದಿನಗಳಲ್ಲಿ ತಮಿಳುನಾಡು, ಪಾಂಡಿಚೇರಿ, ಆಂಧ್ರಪ್ರದೇಶ ಪ್ರದೇಶದಲ್ಲೂ ವಾಯುಭಾರ ಕುಸಿತ ಸಾಧ್ಯತೆ ಇದೆ. ಪರಿಣಾಮ ಕರಾವಳಿ, ದಕ್ಷಿಣ ಒಳನಾಡಿನಲ್ಲಿ 17ರ ವರೆಗೆ ವ್ಯಾಪಕ ಮಳೆಯಾಗುವ ಹೆಚ್ಚಿನ ಸಾಧ್ಯತೆ ಇದ್ದು, ಉತ್ತರ ಒಳನಾಡಿನ ಹಲವೆಡೆ ಮಳೆ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಬೆಂಗಳೂರು, ಮಂಡ್ಯ, ಮೈಸೂರು, ಚಾಮರಾಜನಗರ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ ಹಾಗೂ ಹಾವೇರಿ. ಈ ಜಿಲ್ಲೆಗಳ ಹಲವೆಡೆ ಅಕ್ಟೋಬರ್ 17ರ ವರೆಗೆ ಭಾರಿಯಿಂದ ಅತೀ ಭಾರಿ ಮಳೆ ಸಾಧ್ಯತೆ ಇದೆ. ಈ ಹಿನ್ನಲೆ ಈ ಜಿಲ್ಲೆಗಳಿಗೆ ಅಕ್ಟೋಬರ್ 17ರ ವರೆಗೆ ಯಲ್ಲೋ ಹಾಗೂ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಅಕ್ಟೋಬರ್ 17ರ ವರೆಗೆ ಸಾಧಾರಣದಿಂದ ಭಾರಿ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಜ್ಞ ಸಿ.ಎಸ್ ಪಾಟೀಲ್ ತಿಳಿಸಿದ್ದಾರೆ.