ಹೆಚ್ಎಂಟಿ ಕಾರ್ಖಾನೆಗೆ ನೀಡಿದ ಭೂಮಿಯನ್ನು ವಾಪಸ್ಸು ಪಡೆಯುವ ಯತ್ನ ನಡೆದಿದೆ: ಪರಮೇಶ್ವರ್
ಸಿಪಿ ಯೋಗೇಶ್ವರ್ ಬೆನ್ನಲ್ಲೇ ಇನ್ನೂ 8ಜನ ಬಿಜೆಪಿ ಶಾಸಕರು ಕಾಂಗ್ರೆಸ್ ಪಕ್ಷ ಸೇರಲಿರುವ ವದಂತಿಯನ್ನು ಕೇಳಿದಾಗ ಪ್ರತಿಕ್ರಿಯಿಸಿದ ಪರಮೇಶ್ವರ್, ತನಗಂತೂ ಅದರ ಬಗ್ಗೆ ಮಾಹಿತಿ ಇಲ್ಲ, ಎಸ್ ಟಿ ಸೋಮಶೇಖರ್ ವಿಷಯದ ಬಗ್ಗೆ ಮಾತಾಡಿರುವುದರಿಂದ ಅವರಿಂದಲೇ ಹೆಚ್ಚಿನ ವಿವರಣೆ ಸಿಗಬಹುದು ಎಂದರು.
ಶಿವಮೊಗ್ಗ: ಕೇಂದ್ರ ಭಾರೀ ಕೈಗಾರಿಕೆ ಮತ್ತ್ತು ಉಕ್ಕು ಸಚಿವ ಹೆಚ್ ಡಿ ಕುಮಾರಸ್ವಾಮಿಯವರು ಮುಚ್ಚಿರುವ ಹೆಚ್ಎಂಟಿ ಕಾರ್ಖಾನೆಯನ್ನು ಪುನರಾರಂಭಿಸುವ ಬಗ್ಗೆ ಮಾತಾಡುತ್ತಾರೆ. ಅದರೆ ಶಿವಮೊಗ್ಗದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಗೃಹಸಚಿವ ಜಿ ಪರಮೇಶ್ವರ್, ಹೆಚ್ಎಂಟಿ ಕಾರ್ಖಾನೆ ಮುಚ್ಚಿಹೋಗಿರುವುದರಿಂದ ಅದಕ್ಕೆ ನೀಡಿದ ಜಮೀನನ್ನು ವಾಪಸ್ಸು ಪಡೆಯಲು ರಾಜ್ಯ ಅರಣ್ಯ ಇಲಾಖೆ ಪ್ರಯತ್ನಿಸುತ್ತಿದೆ ಎಂದು ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಗೃಹ ಸಚಿವ ಪರಮೇಶ್ವರ್ ತವರು ಜಿಲ್ಲೆಯಲ್ಲಿ ಸೋರುತಿಹುದು ಪೊಲೀಸ್ ಠಾಣೆ