ಚಿಕ್ಕಮಗಳೂರು-ಶೃಂಗೇರಿ ಹೆದ್ದಾರಿಯಲ್ಲಿ ಕಾಡಾನೆ ಹಿಂಡು: ವಾಹನ ಸವಾರರಿಗೆ ಎಚ್ಚರಿಕೆ ನೀಡಿದ ಅರಣ್ಯ ಇಲಾಖೆ
ಚಿಕ್ಕಮಗಳೂರು ತಾಲೂಕಿನ ಅಲ್ದೂರು ಅರಣ್ಯ ವಲಯ ವ್ಯಾಪ್ತಿಯಲ್ಲಿರುವ ಬಸರಹಳ್ಳಿ ಗ್ರಾಮದ ಬಳಿ ಕಾಡಾನೆಗಳ ಹಿಂಡು ಕಂಡುಬಂದಿದ್ದು, ಸ್ಥಳೀಯರು, ವಾಹನ ಸವಾರರು ಆತಂಕಗೊಂಡಿದ್ದಾರೆ. ಅದರಲ್ಲಿಯೂ ಚಿಕ್ಕಮಗಳೂರುನಿಂದ ಶೃಂಗೇರಿ ತೆರಳುವ ವಾಹನ ಸವಾರರು ಎಚ್ಚರಿಕೆಯಿಂದ ಇರುವಂತೆ ಅರಣ್ಯ ಇಲಾಖೆ ಸೂಚನೆ ನೀಡಿದೆ.
ಚಿಕ್ಕಮಗಳೂರು, ಸೆಪ್ಟೆಂಬರ್ 25: ಚಿಕ್ಕಮಗಳೂರು-ಶೃಂಗೇರಿ ರಾಜ್ಯ ಹೆದ್ದಾರಿಯಲ್ಲಿ 7 ಕ್ಕೂ ಅಧಿಕ ಕಾಡಾನೆಗಳು (elephants) ಪ್ರತ್ಯಕ್ಷವಾಗಿವೆ. ಚಿಕ್ಕಮಗಳೂರು ತಾಲೂಕಿನ ಅಲ್ದೂರು ಅರಣ್ಯ ವಲಯ ವ್ಯಾಪ್ತಿಯಲ್ಲಿರುವ ಬಸರಹಳ್ಳಿ ಗ್ರಾಮದ ಬಳಿ ಕಾಡಾನೆಗಳ ಹಿಂಡು ಕಂಡುಬಂದಿದ್ದು, ಸ್ಥಳೀಯರು, ವಾಹನ ಸವಾರರು ಆತಂಕಗೊಂಡಿದ್ದಾರೆ. ಅದರಲ್ಲಿಯೂ ಚಿಕ್ಕಮಗಳೂರುನಿಂದ ಶೃಂಗೇರಿ ತೆರಳುವ ವಾಹನ ಸವಾರರು ಎಚ್ಚರಿಕೆಯಿಂದ ಇರುವಂತೆ ಅರಣ್ಯ ಇಲಾಖೆ ಸೂಚನೆ ನೀಡಿದೆ. ಇದೆ ಮಾರ್ಗವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಶೃಂಗೇರಿಗೆ ಪ್ರವಾಸಿಗರು ಪ್ರಯಾಣಿಸುತ್ತಾರೆ. ಹಾಗಾಗಿ ಅರಣ್ಯ ಇಲಾಖೆ ಎಚ್ಚರಿಕೆ ನೀಡಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Latest Videos