ಹುಲಿಗಳ ಸಾವು: ಮಾಧ್ಯಮದವರ ಪ್ರಶ್ನೆಗಳಿಗೆ ಸಮಂಜಸ ಉತ್ತರ ನೀಡದೆ ಪಲಾಯನಗೈದ ಅರಣ್ಯ ಸಚಿವ ಈಶ್ವರ್ ಖಂಡ್ರೆ
ಮಲೆಮಹದೇಶ್ವರ ವನ್ಯಧಾಮದ ಹೂಗ್ಯಂನ ಮೀಣ್ಯಂ ಅರಣ್ಯ ಪ್ರದೇಶದಲ್ಲಿ 5 ಹುಲಿಗಳ ಅಸಹಜ ಸಾವು ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದೆ. ಇಂಥ ಘಟನೆ ಬೇರೆ ಯಾವುದೇ ದೇಶದಲ್ಲಿ ನಡೆದಿದ್ದರೆ ಅಲ್ಲಿನ ಸರ್ಕಾರವೇ ರಾಜೀನಾಮೆ ಕೊಡಬೇಕಾಗುತಿತ್ತು ಅಂತ ಹಿರಿಯ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳುತ್ತಾರೆ. ಆದರೆ ರಾಜ್ಯ ಸರ್ಕಾರ ಅದೇನೂ ದೊಡ್ಡ ಘಟನೆ ಅಲ್ಲವೆಂಬಂತೆ ವರ್ತಿಸುತ್ತಿದೆ.
ಚಾಮರಾಜನಗರ ಜೂನ್ 27: ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ವನ್ಯಜೀವಿಧಾಮದ ಮೀಣ್ಯಂ ವಲಯದಲ್ಲಿ 5 ಹುಲಿಗಳ ಅಸಹಜ ಸಾವನ್ನು ಕಾಂಗ್ರೆಸ್ ಸರ್ಕಾರ ಹಗುರವಾಗಿ ಪರಿಗಣಿಸಿದಂತಿದೆ. ಅರಣ್ಯ ಸಚಿವ ಈಶ್ವರ್ ಖಂಡ್ರೆ (Eshwar Khandre) ಇಂದು ಮಾಧ್ಯಮದರು ಕೇಳಿದ ಪ್ರಶ್ನೆಗಳಿಗೆ ಸಮಂಜಸ ಉತ್ತರ ಕೊಡದೆ ಏರುಧ್ವನಿಯಲ್ಲಿ ಮಾತಾಡಿ ಪತ್ರಕರ್ತರ ಬಾಯಿ ಮುಚ್ಚಿಸುವ ಪ್ರಯತ್ನ ಮಾಡಿದರು. ಆದರೆ ಪತ್ರಕರ್ತರು ಧ್ವನಿ ಏರಿಸದೆ ಮಾತಾಡಿ ಅಂತ ಹೇಳಿದಾಗ ಮೆತ್ತಗಾದ ಸಚಿವ, ನಡೆದ ಘಟನೆಯನ್ನು ಬಹಳ ಪ್ರೀತಿಯಿಂದ ಗೌರವದಿಂದ ಮಾಧ್ಯಮಗಳೊಂದಿಗೆ ಮಾತಾಡಿ ಮಾಹಿತಿಯನ್ನು ಜನರಿಗೆ ರವಾನಿಸುವ ಕೆಲಸ ಮಾಡಿದ್ದೇನೆ, ಮಿಕ್ಕಿದ ಪ್ರಶ್ನೆಗಳಿಗೆ ತನಿಖಾ ವರದಿ ಬಂದ ಬಳಿಕ ಉತ್ತರ ನೀಡುತ್ತೇನೆ ಎಂದು ಹೇಳಿ ಅಲ್ಲಿಂದ ಅವಸರದಲ್ಲಿ ಪಲಾಯನ ಮಾಡಿದರು.
ಇದನ್ನೂ ಓದಿ: ಮಲೆಮಹದೇಶ್ವರ ಅರಣ್ಯದಲ್ಲಿ 4 ಹುಲಿಗಳ ಅಸಹಜ ಸಾವು: ವಿಷಪ್ರಾಶನ ಶಂಕೆ, ತನಿಖೆಗೆ ಸಚಿವರ ಆದೇಶ
ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ