AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ: ಸತತ 17 ಗಂಟೆಗಳ ಕಾರ್ಯಾಚರಣೆ; ಕೆಸರಲ್ಲಿ ಸಿಲುಕಿದ್ದ ಮೂರು ಆನೆಗಳ ರಕ್ಷಣೆ

ಚಾಮರಾಜನಗರ: ಸತತ 17 ಗಂಟೆಗಳ ಕಾರ್ಯಾಚರಣೆ; ಕೆಸರಲ್ಲಿ ಸಿಲುಕಿದ್ದ ಮೂರು ಆನೆಗಳ ರಕ್ಷಣೆ

ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on:Apr 20, 2026 | 10:10 AM

Share

ಚಾಮರಾಜನಗರದ ಮಲೆ ಮಹದೇಶ್ವರ ವನ್ಯಜೀವಿಧಾಮದ ಉಡುತೊರೆ ಹಳ್ಳ ಜಲಾಶಯದ ಕೆಸರಿನಲ್ಲಿ ಸಿಲುಕಿದ್ದ ಮೂರು ಕಾಡಾನೆಗಳನ್ನು ಅರಣ್ಯ ಸಿಬ್ಬಂದಿ ಸತತ 17 ಗಂಟೆಗಳ ಕಾರ್ಯಾಚರಣೆ ನಡೆಸಿ ರಕ್ಷಿಸಿದ್ದಾರೆ. ಎರಡು ಆನೆಗಳು ಕಾಡಿಗೆ ಮರಳಿದ್ದು, ಇನ್ನೊಂದು ಆನೆಗೆ ಚಿಕಿತ್ಸೆ ಮುಂದುವರಿದಿದೆ. ಒಂದು ಆನೆ ತೀವ್ರ ಅಸ್ವಸ್ಥಗೊಂಡಿದ್ದು, ಮೇಲೇಳಲೂ ಆಗದ ಸ್ಥಿತಿಯಲ್ಲಿತ್ತು ಎನ್ನಲಾಗಿದೆ.

ಚಾಮರಾಜನಗರ, ಏಪ್ರಿಲ್​​ 20: ಮಲೆ ಮಹದೇಶ್ವರ ವನ್ಯಜೀವಿಧಾಮದ ಹನೂರು ಬಫರ್ ವಲಯಕ್ಕೆ ಸೇರಿದ ಉಡುತೊರೆ ಹಳ್ಳ ಜಲಾಶಯದ ಕೆಸರಿನಲ್ಲಿ ಸಿಲುಕಿದ್ದ ಮೂರು ಕಾಡಾನೆಗಳ್ನು ಅರಣ್ಯ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಬಳಿಕ ಅವುಗಳಿಗೆ ಚಿಕಿತ್ಸೆ ನೀಡಲಾಗಿದ್ದು, ಆ ಪೈಕಿ ಎರಡು ಆನೆಗಳು ಕಾಡಿನತ್ತ ಪಯಣ ಬೆಳೆಸಿವೆ. ಮತ್ತೊಂದು ಆನೆಗೆ ಅರಣ್ಯಾಧಿಕಾರಿಗಳಿಂದ ಆರೈಕೆ ಮುಂದುವರಿದಿದೆ. ಸತತ 17 ಗಂಟೆಗಳ ಕಾರ್ಯಾಚರಣೆ ಬಳಿಕ ಮೂರು ಆನೆಗಳನ್ನ ರಕ್ಷಣೆ ಮಾಡಲಾಗಿತ್ತು. ಒಂದು ಆನೆ ತೀವ್ರ ಅಸ್ವಸ್ಥಗೊಂಡಿದ್ದು, ಮೇಲೇಳಲೂ ಆಗದ ಸ್ಥಿತಿಯಲ್ಲಿತ್ತು.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Apr 20, 2026 10:09 AM
Follow Us
Suraj Prasad SN
Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More