AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವನಸಮುದ್ರದ ಕಾಲುವೆಯಲ್ಲಿ ಬಿದ್ದಿದ್ದ ಕಾಡಾನೆ ಮೇಲೆ ಬಂದಿದ್ದು ಹೇಗೆ ಗೊತ್ತಾ?

ಶಿವನಸಮುದ್ರದ ಕಾಲುವೆಯಲ್ಲಿ ಬಿದ್ದಿದ್ದ ಕಾಡಾನೆ ಮೇಲೆ ಬಂದಿದ್ದು ಹೇಗೆ ಗೊತ್ತಾ?

ಸುಷ್ಮಾ ಚಕ್ರೆ
|

Updated on: Nov 19, 2025 | 10:53 PM

Share

ಕಾಡಾನೆ ಆಹಾರ ಅರಸಿ ಬಂದು ಜಿಲ್ಲೆಯ ಮಳವಳ್ಳಿ ತಾಲೂಕಿನ‌ ಶಿವವಸಮುದ್ರ ಬಳಿಯ ನಾಲೆಗೆ ಬಿದ್ದಿದೆ. ಖಾಸಗಿ ಪವರ್ ಸ್ಟೇಷನ್​ಗೆ ನೀರು ಸರಬರಾಜು ಮಾಡುವ ನಾಲೆಯಲ್ಲೇ 3 ದಿನದಿಂದ ಸಿಲುಕಿತ್ತು. ಸ್ಥಳದಲ್ಲೇ ಬೀಡುಬಿಟ್ಟ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರು ಕಾಡಾನೆಗೆ ಆಹಾರ ನೀಡಿದ್ದರು. 2 ಅರಿವಳಿಕೆ ಚುಚ್ಚುಮದ್ದು ನೀಡಿದ ನಂತರ ಕಾಡಾನೆ ಪ್ರಜ್ಞೆತಪ್ಪಿ ನಾಲೆಯಲ್ಲೇ ಕುಸಿದುಬಿದ್ದಿದೆ. ಬಳಿಕ ಸಿಬ್ಬಂದಿ ನಾಲೆಗೆ ಇಳಿದು ಕಾಡಾನೆಯ ಕಾಲುಗಳಿಗೆ ಬೆಲ್ಟ್ ಕಟ್ಟಿ ಕಬ್ಬಿಣದ ಮ್ಯಾಟ್ ಮೇಲೆ ಮಲಗಿಸಿ ಕ್ರೇನ್ ಮೂಲಕ ಕಾಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಮೇಲೆತ್ತಿದ್ದಾರೆ.

ಮಂಡ್ಯ, ನವೆಂಬರ್​​ 19: ಮಂಡ್ಯ ಜಿಲ್ಲೆಯ ಶಿವನಸಮುದ್ರದ ಬಳಿಯ ಕಾಲುವೆಯಲ್ಲಿ ಕಾಡಾನೆ ಮರಿಯೊಂದು ಬಿದ್ದಿತ್ತು. 3 ದಿನವಾದರೂ ಆ ಆನೆಗೆ (Elephant) ಮೇಲೆ ಬರಲು ಸಾಧ್ಯವಾಗದೆ ಅಲ್ಲೇ ಸಿಲುಕಿತ್ತು. ಅರಣ್ಯ ಇಲಾಖೆ ಸಿಬ್ಬಂದಿ ಕೊನೆಗೂ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ನಡೆಸಿ ಆ ಆನೆಮರಿಯನ್ನು ಸುರಕ್ಷಿತವಾಗಿ ಹೊರಗೆ ತಂದು, ಅರಣ್ಯಕ್ಕೆ ಬಿಟ್ಟಿದ್ದಾರೆ. ಸಣ್ಣಪುಟ್ಟ ಗಾಯಗಳಾಗಿದ್ದ ಕಾಡಾನೆಗೆ ಚಿಕಿತ್ಸೆ ನೀಡಿ ಅರಣ್ಯಕ್ಕೆ ಬಿಡಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ