ಪತಿಗಾಗಿ ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ವಿಧಾನ ಪರಿಷತ್ ಟಿಕೆಟ್ ಗಿಟ್ಟಿಸಿದ ಪೂರ್ಣಿಮಾ ಶ್ರೀನಿವಾಸ ಯಾವುದೇ ಬೇಡಿಕೆಯಿಲ್ಲದೆ ಕಾಂಗ್ರೆಸ್ ಸೇರುತ್ತಿದ್ದೇನೆ ಅನ್ನುತ್ತಾರೆ!

ಪತಿಗಾಗಿ ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ವಿಧಾನ ಪರಿಷತ್ ಟಿಕೆಟ್ ಗಿಟ್ಟಿಸಿದ ಪೂರ್ಣಿಮಾ ಶ್ರೀನಿವಾಸ ಯಾವುದೇ ಬೇಡಿಕೆಯಿಲ್ಲದೆ ಕಾಂಗ್ರೆಸ್ ಸೇರುತ್ತಿದ್ದೇನೆ ಅನ್ನುತ್ತಾರೆ!

ಅರುಣ್​ ಕುಮಾರ್​ ಬೆಳ್ಳಿ
|

Updated on: Oct 11, 2023 | 11:36 AM

ಲೋಕ ಸಭಾ ಚುನಾವಣೆಗೆ ಮೊದಲು ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ಕಾಂಗ್ರೆಸ್ ನೆಲೆಯನ್ನು ವಿಸ್ತಾರಗೊಳಿಸುವುದರ ಜೊತೆಗೆ ಬಲಪಡಿಸುತ್ತಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ. ಅವರನ್ನು ಕರ್ನಾಟಕ ರಾಜಕಾರಣದ ಚಾಣಕ್ಯ ಅಂತ ಹೇಳಿದರೆ ಉತ್ಪ್ರೇಕ್ಷೆ ಅನಿಸದು.

ಚಿತ್ರದುರ್ಗ: ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ (Purnima Srinivas) ಕಾಂಗ್ರೆಸ್ ಸೇರುವ ನಿರ್ಧಾರವನ್ನು ಅಧಿಕೃತವಾಗಿ ಪ್ರಕಟಿಸಿದ್ದಾರೆ. ಕೃಷ್ಣಜನ್ಮಾಷ್ಟಮಿಯಂದು ಡಿಕೆ ಶಿವಕುಮಾರ್ (DK Srinivas) ಬೆಂಗಳೂರಿನ ಕೆಆರ್ ಪುರಂನಲ್ಲಿರುವ ಪೂರ್ಣಿಮಾ ಮನೆಗೆ ಊಟಕ್ಕೆ ಹೋದಾಗಲೇ ಅವರು ಕಾಂಗ್ರೆಸ್ ಸೇರುವುದು ಹೆಚ್ಚು ಕಡಿಮೆ ಖಚಿತವಾಗಿತ್ತು. ಪೂರ್ಣಿಮಾ ಕಾಂಗ್ರೆಸ್ ಸೇರುವ ಹಿಂದೆ ಕಾರಣವೂ ಇದೆ. ಅವರ ಪತಿ ಟಿಡಿ ಶ್ರೀನಿವಾಸ್ ಗೆ (TD Srinivas) ಕಾಂಗ್ರೆಸ್ ಪಕ್ಷವು ವಿಧಾನ ಪರಿಷತ್ ಆಗ್ನೇಯ ಶಿಕ್ಷಕರ ಕ್ಷೇತ್ರದ ಟಿಕೆಟ್ ನೀಡಿದೆ. ಹಾಗಾಗಿ, ಇದೊಂದು ಕೊಡು-ತೊಗೋ ರೀತಿಯ ಒಪ್ಪಂದ. ನಿನ್ನೆ ಚಿತ್ರದುರ್ಗದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಪೂರ್ಣಿಮಾ ಯಾವುದೇ ಬೇಡಿಕೆ ಷರತ್ತುಗಳಿಲ್ಲದೆ ಕಾಂಗ್ರೆಸ್ ಸೇರುತ್ತಿರುವುದಾಗಿ ಹೇಳಿದರಾದರೂ ಅವರ ಬೇಡಿಕೆ ಈಗಾಗಲೇ ಈಡೇರಿದೆ. ಲೋಕ ಸಭಾ ಚುನಾವಣೆಗೆ ಮೊದಲು ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ಕಾಂಗ್ರೆಸ್ ನೆಲೆಯನ್ನು ವಿಸ್ತಾರಗೊಳಿಸುವುದರ ಜೊತೆಗೆ ಬಲಪಡಿಸುತ್ತಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ. ಅವರನ್ನು ಕರ್ನಾಟಕ ರಾಜಕಾರಣದ ಚಾಣಕ್ಯ ಅಂತ ಹೇಳಿದರೆ ಉತ್ಪ್ರೇಕ್ಷೆ ಅನಿಸದು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ