ವಿದ್ಯುಕ್ತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವ ಮೊದಲು ಪೂರ್ಣಿಮಾ ಶ್ರೀನಿವಾಸ್ ಸಿದ್ದರಾಮಯ್ಯ ಕಾಲಿಗೆ ನಮಸ್ಕರಿಸಿದರು

ವಿದ್ಯುಕ್ತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವ ಮೊದಲು ಪೂರ್ಣಿಮಾ ಶ್ರೀನಿವಾಸ್ ಸಿದ್ದರಾಮಯ್ಯ ಕಾಲಿಗೆ ನಮಸ್ಕರಿಸಿದರು

ಅರುಣ್​ ಕುಮಾರ್​ ಬೆಳ್ಳಿ
|

Updated on: Oct 20, 2023 | 4:05 PM

ಸಿದ್ದರಾಮಯ್ಯ ಆಗಮಿಸುತ್ತಿದ್ದಂತೆಯೇ ವೇದಿಕೆ ಮೇಲೆ ಹಾಜರಿದ್ದ ನಾಯಕರು ಎದ್ದು ನಿಂತು ಅವರಿಗೆ ವಂದಿಸುವುದನ್ನು ನೋಡಬಹುದು. ಕೆಲ ನಾಯಕರು ಅವರ ಕಾಲಿಗೆ ನಮಸ್ಕರಿಸುತ್ತಾರೆ. ಪೂರ್ಣಿಮಾ ಶ್ರೀನಿವಾಸ್ ಸಹ ಸಿದ್ದರಾಮಯ್ಯನವರ ಕಾಲಿಗೆ ನಮಸ್ಕರಿಸುತ್ತಾರೆ. ವೇದಿಕೆಗೆ ಸಿದ್ದರಾಮಯ್ಯ ಎಡಭಾಗದಿಂದ ಆಗಮಿಸಿದರೆ ಶಿವಕುಮಾರ್ ಅವರ ವಿರುದ್ಧ ದಿಕ್ಕಿನಿಂದ ಬರುತ್ತಾರೆ.

ಬೆಂಗಳೂರು: ಬಿಜೆಪಿಯ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ (Purnima Srinivas) ಕಾಂಗ್ರೆಸ್ ಸೇರುವ ನಿರ್ಧಾರ ಪ್ರಕಟಿಸಿದ್ದನ್ನು ನಾವು ಈಗಾಗಲೇ ವರದಿ ಮಾಡಿದ್ದೇವೆ. ಅವರು ಇಂದು ತಮ್ಮ ಪತಿ ಟಿಡಿ ಶ್ರೀನಿವಾಸ್ ಜೊತೆ ವಿದ್ಯುಕ್ತವಾಗಿ ಕಾಂಗ್ರೆಸ್ ಸೇರ್ಪಡೆಯಾದರು. ಈ ಸಂದರ್ಭಕ್ಕಾಗಿ ನಗರದ ಕೆಪಿಸಿಸಿ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah), ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಸೇರಿದಂತೆ ರಾಜ್ಯ ಕಾಂಗ್ರೆಸ್ ನ ಪ್ರಮುಖ ನಾಯಕರು ಕೆಪಿಸಿಸಿ ಕಚೇರಿಯಲ್ಲಿ ಸೇರಿದ್ದರು. ಸಿದ್ದರಾಮಯ್ಯ ಆಗಮಿಸುತ್ತಿದ್ದಂತೆಯೇ ವೇದಿಕೆ ಮೇಲೆ ಹಾಜರಿದ್ದ ನಾಯಕರು ಎದ್ದು ನಿಂತು ಅವರಿಗೆ ವಂದಿಸುವುದನ್ನು ನೋಡಬಹುದು. ಕೆಲ ನಾಯಕರು ಅವರ ಕಾಲಿಗೆ ನಮಸ್ಕರಿಸುತ್ತಾರೆ. ಪೂರ್ಣಿಮಾ ಶ್ರೀನಿವಾಸ್ ಸಹ ಸಿದ್ದರಾಮಯ್ಯನವರ ಕಾಲಿಗೆ ನಮಸ್ಕರಿಸುತ್ತಾರೆ. ವೇದಿಕೆಗೆ ಸಿದ್ದರಾಮಯ್ಯ ಎಡಭಾಗದಿಂದ ಆಗಮಿಸಿದರೆ ಶಿವಕುಮಾರ್ ಅವರ ವಿರುದ್ಧ ದಿಕ್ಕಿನಿಂದ ಬರುತ್ತಾರೆ. ವೇದಿಕೆಯ ಮೇಲೆ ಸಚಿವ ಡಿ ಸುಧಾಕರ್, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ಶಾಸಕ ಟಿಬಿ ಜಯಚಂದ್ರ, ಹಿರಿಯ ನಾಯಕ ರಾಜೀವ್ ಗೌಡ, ಪಕ್ಷದ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಮೊದಲಾದವರಿದ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ