BSY Birthday: 80 ನೇ ವಸಂತಕ್ಕೆ ಕಾಲಿಟ್ಟ ಬಿಎಸ್ ಯಡಿಯೂರಪ್ಪ, ಗಣ್ಯರು, ಬೆಂಬಲಿಗರಿಂದ ಶುಭ ಹಾರೈಕೆ

ಅರುಣ್​ ಕುಮಾರ್​ ಬೆಳ್ಳಿ

Updated on: Feb 27, 2023 | 10:19 AM

ಪ್ರಧಾನ ಮಂತ್ರಿ ನರೇಂದ್ರ ಮೋದಿ ಆದಿಯಾಗಿ ರಾಷ್ಟ್ರ ಮತ್ತು ರಾಜ್ಯದ ಅನೇಕ ಗಣ್ಯರು ಕರ್ನಾಟಕದ ಮೇರು ರಾಜಕಾರಣಿಗೆ ಶುಭಾಷಯಗಳನ್ನು ಕೋರಿದ್ದಾರೆ.

ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ (BS Yediyurappa) ಇಂದು ತಮ್ಮ 80ನೇ ಹುಟ್ಟುಹಬ್ಬ (birthday) ಆಚರಿಸಿಕೊಳ್ಳುತ್ತಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ಆದಿಯಾಗಿ ರಾಷ್ಟ್ರ ಮತ್ತು ರಾಜ್ಯದ ಅನೇಕ ಗಣ್ಯರು ಕರ್ನಾಟಕದ ಮೇರು ರಾಜಕಾರಣಿಗೆ ಶುಭಾಷಯಗಳನ್ನು ಕೋರಿದ್ದಾರೆ. ಶ್ರೀಯುತರಿಗೆ ವಿಷಸ್ ಹೇಳಲು ನಗರದಲ್ಲಿರುವ ಅವರ ಮನೆಯಲ್ಲಿ ಬೆಳಗಿನ ಸಮಯವೇ ಅಪ್ತರು, ಬೆಂಬಲಿಗರು ಹಾಜರಿದ್ದರು. ಅವರಿಂದ ಹಾರೈಕೆಗಳನ್ನು ಸ್ವೀಕರಿಸಿ ಧನ್ಯವಾದಗಳನ್ನು ಹೇಳಲು ಯಡಿಯೂರಪ್ಪನವರು ಮೆಟ್ಟಲಿಳಿದು ಬರುತ್ತಿರುವುದನ್ನು ಕಾಣಬಹುದು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.