AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಟಿಂಗ್ ಆಪರೇಷನ್ ಟೆನ್ಷನ್ ಮಧ್ಯೆ ರಾಹುಲ್ ಗಾಂಧಿ ಭೇಟಿಗೆ ಸಮಯ ಕೇಳಿದ ಸಿದ್ದರಾಮಯ್ಯ

ಸ್ಟಿಂಗ್ ಆಪರೇಷನ್ ಟೆನ್ಷನ್ ಮಧ್ಯೆ ರಾಹುಲ್ ಗಾಂಧಿ ಭೇಟಿಗೆ ಸಮಯ ಕೇಳಿದ ಸಿದ್ದರಾಮಯ್ಯ

ಪ್ರಸನ್ನ ಗಾಂವ್ಕರ್​
| Edited By: |

Updated on: Oct 25, 2026 | 6:26 PM

Share

ಕರ್ನಾಟಕದಲ್ಲಿ ಭಾರೀ ತಲ್ಲಣ ಸೃಷ್ಟಿಸಿರುವ ಸ್ಟಿಂಗ್ ಆಪರೇಷನ್ ಬಿಸಿ ಇನ್ನೂ ತಣ್ಣಗಾಗಿಲ್ಲ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಗುರಿಯಾಗಿಸಿಕೊಂಡು ನಡೆಸಲಾಗಿದೆ ಎನ್ನಲಾದ ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷದವರ ಹಲವರ ಹೆಸರುಗಳು ಕೇಳಿಬರುತ್ತಿವೆ. ಈ ಆರೋಪ ಸಾಬೀತಾದರೆ ಅವರ ವಿರುದ್ಧ ಕ್ರಮ ತೆಗೆದುಕೊಳ್ಳುವುದಾಗಿ ಕಾಂಗ್ರೆಸ್ ರಾಜ್ಯಾಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದ್ದಾರೆ. ಆದರೆ, ಇಷ್ಟಕ್ಕೇ ಸುಮ್ಮನಾಗದ ಸಿದ್ದರಾಮಯ್ಯ ಇದೀಗ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭೇಟಿಗೆ ಸಮಯ‌ ಕೇಳಿದ್ದಾರೆ ಎನ್ನಲಾಗಿದೆ.

ಬೆಂಗಳೂರು, ಅಕ್ಟೋಬರ್ 25: ಕರ್ನಾಟಕದಲ್ಲಿ ಭಾರೀ ತಲ್ಲಣ ಸೃಷ್ಟಿಸಿರುವ ಸ್ಟಿಂಗ್ ಆಪರೇಷನ್ ಬಿಸಿ ಇನ್ನೂ ತಣ್ಣಗಾಗಿಲ್ಲ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಗುರಿಯಾಗಿಸಿಕೊಂಡು ನಡೆಸಲಾಗಿದೆ ಎನ್ನಲಾದ ಸ್ಟಿಂಗ್ ಆಪರೇಷನ್​ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷದವರ ಹಲವರ ಹೆಸರುಗಳು ಕೇಳಿಬರುತ್ತಿವೆ. ಈ ಆರೋಪ ಸಾಬೀತಾದರೆ ಅವರ ವಿರುದ್ಧ ಕ್ರಮ ತೆಗೆದುಕೊಳ್ಳುವುದಾಗಿ ಕಾಂಗ್ರೆಸ್ ರಾಜ್ಯಾಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದ್ದಾರೆ. ಆದರೆ, ಇಷ್ಟಕ್ಕೇ ಸುಮ್ಮನಾಗದ ಸಿದ್ದರಾಮಯ್ಯ ಇದೀಗ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭೇಟಿಗೆ ಸಮಯ‌ ಕೇಳಿದ್ದಾರೆ ಎನ್ನಲಾಗಿದೆ. ನವೆಂಬರ್ 1ರಂದು ದೆಹಲಿಗೆ ತೆರಳುವ ಮಾಜಿ ಸಿಎಂ ಸಿದ್ದರಾಮಯ್ಯ ಎಐಸಿಸಿ ಹಾಗೂ ಇಂಡಿ ಒಕ್ಕೂಟದ ಹೋರಾಟದಲ್ಲಿ ಭಾಗಿಯಾಗಲಿದ್ದಾರೆ. ನವೆಂಬರ್ 2ರಂದು ರಾಹುಲ್​ ಗಾಂಧಿಯ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿದ್ದಾರೆ. ಈ ವೇಳೆ ಅವರಿಬ್ಬರೂ ಸ್ಟಿಂಗ್ ಆಪರೇಷನ್ ಹಾಗೂ ರಾಜ್ಯ ರಾಜಕೀಯದ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆಯಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರಸನ್ನ ಗಾಂವ್ಕರ್​
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More