ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅರೋಗ್ಯದಲ್ಲಿ ಚೇತರಿಕೆ, ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಅರುಣ್​ ಕುಮಾರ್​ ಬೆಳ್ಳಿ

Updated on: Aug 30, 2023 | 7:10 PM

ವೈದ್ಯರ ತಪಾಸಣೆಯ ಪ್ರಕಾರ ಅವರು ಬಳಲಿಕೆ ಮತ್ತು ಒಂದು ಬಗೆಯ ಚಡಪಡಿಕೆ ಅನುಭವಿಸುತ್ತಿದ್ದರು. ಡಾ ಸತೀಶ್ ಚಂದ್ರ ನೇತೃತ್ವದ ಅಪೊಲ್ಲೋ ಆಸ್ಪತ್ರೆ ವೈದ್ಯರ ತಂಡ ಕುಮಾರಸ್ವಾಮಿಯರಿಗೆ ಚಿಕಿತ್ಸೆ ಒದಗಿಸುತ್ತಿದೆ. ಆಸ್ಪತ್ರೆಯ ಮುಂಭಾಗದಲ್ಲಿ ಅನಿತಾ ಕುಮಾರಸ್ವಾಮಿ ನಿಂತಿರುವುದನ್ನು ವಿಡಿಯೋದಲ್ಲಿ ನೋಡಬಹುದು.

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್ ಶಾಸಕ ಹೆಚ್ ಡಿ ಕುಮಾರಸ್ವಾಮಿಯವರ (HD Kumaraswamy) ಆರೋಗ್ಯ ಸ್ಥಿರವಾಗಿದೆ ಮತ್ತು ಜಯನಗರ ಅಪೊಲ್ಲೋ ಆಸ್ಪತ್ರೆಯ (Apollo Hospital) ವೈದ್ಯರು ನೀಡುತ್ತಿರುವ ಚಿಕಿತ್ಸೆಗೆ ಸೂಕ್ತವಾಗಿ ಸ್ಪಂದಿಸುತ್ತಿದ್ದಾರೆ. ಅಸ್ಪತ್ರೆ ಬಿಡುಗಡೆ ಮಾಡಿರುವ ಬುಲೆಟಿನ್ ಪ್ರಕಾರ ಅವರ ರಕ್ತದೊತ್ತಡ (blood pressure) ಮತ್ತು ಹೃದಯ ಬಡಿತ (pulse) ಸಾಮಾನ್ಯವಾಗಿವೆ. ನಾವು ಈಗಾಗಲೇ ವರದಿ ಮಾಡಿರುವಂತೆ ಇಂದು ಬೆಳಗಿನ ಜಾವ ಕುಮಾರಸ್ವಾಮಿಯವರ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಅವರನ್ನು ಕೂಡಲೇ ಆಸ್ಪತ್ರೆಗೆ ತೆಗೆದುಕೊಂಡು ಹೋಗಲಾಗಿತ್ತು. ವೈದ್ಯರ ತಪಾಸಣೆಯ ಪ್ರಕಾರ ಅವರು ಬಳಲಿಕೆ ಮತ್ತು ಒಂದು ಬಗೆಯ ಚಡಪಡಿಕೆ ಅನುಭವಿಸುತ್ತಿದ್ದರು. ಡಾ ಸತೀಶ್ ಚಂದ್ರ ನೇತೃತ್ವದ ಅಪೊಲ್ಲೋ ಆಸ್ಪತ್ರೆ ವೈದ್ಯರ ತಂಡ ಕುಮಾರಸ್ವಾಮಿಯರಿಗೆ ಚಿಕಿತ್ಸೆ ಒದಗಿಸುತ್ತಿದೆ. ಆಸ್ಪತ್ರೆಯ ಮುಂಭಾಗದಲ್ಲಿ ಅನಿತಾ ಕುಮಾರಸ್ವಾಮಿ ನಿಂತಿರುವುದನ್ನು ವಿಡಿಯೋದಲ್ಲಿ ನೋಡಬಹುದು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.