ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿ ತೆರಳಿದ ಬಿಎಸ್ ಯಡಿಯೂರಪ್ಪ
ಮಾಜಿ ಸಚಿವ ಬಾಬುರಾವ್ ಗುರುಮಠಕಲ್ ಮತಕ್ಷೇತ್ರದಿಂದ ಸ್ಪರ್ಧಿಸುವ ಬಯಕೆಯನ್ನು ಪದೇಪದೆ ವ್ಯಕ್ತಪಡಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲೇ ಅವರು ಬಿಎಸ್ ವೈ ಅವರೊಂದಿಗೆ ಸುತ್ತುತ್ತಿರಬಹುದು ಎಂಬ ಗುಮಾನಿ ಮೂಡದಿರದು.
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು (BS Yediyurappa) ಬುಧವಾರ ದೆಹಲಿಗೆ ತೆರಳಿದರು. ಭಾರತೀಯ ಜನತಾ ಪಕ್ಷದ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳಲು ಅವರು ತೆರಳಿರುವರೆಂದು ಪಕ್ಷದ ಮೂಲಗಳು ತಿಳಿಸಿವೆ. ಯಡಿಯೂರಪ್ಪನವರು ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ (KIA) ಆಗಮಿಸುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು. ಅವರೊಂದಿಗೆ ಕಾರಿನಲ್ಲಿ ಬಂದಿಳಿದವರನ್ನು ನೀವು ಗಮನಿಸಿರಬಹುದು. ಹೌದು, ಅದು ಬಿಜೆಪಿ ವಿಧಾನ ಪರಿಷತ್ ಸದಸ್ಯ ಬಾಬುರಾವ್ ಚಿಂಚನಸೂರ್ (Baburao Chinchansur). ಮಾಜಿ ಸಚಿವ ಬಾಬುರಾವ್ ಗುರುಮಠಕಲ್ ಮತಕ್ಷೇತ್ರದಿಂದ ಸ್ಪರ್ಧಿಸುವ ಬಯಕೆಯನ್ನು ಪದೇಪದೆ ವ್ಯಕ್ತಪಡಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲೇ ಅವರು ಬಿಎಸ್ ವೈ ಅವರೊಂದಿಗೆ ಸುತ್ತುತ್ತಿರಬಹುದು ಎಂಬ ಗುಮಾನಿ ಮೂಡದಿರದು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos