ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡರನ್ನು ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ
ಇಂದು ದೇವೇಗೌಡರನ್ನ ಭೇಟಿಯಾಗಿ ಉಭಯ ಕುಶಲೋಪರಿ ವಿಚಾರಿಸಿದ್ದು, ಸಿದ್ದರಾಮಯ್ಯ ನಡೆ ಸಾಕಷ್ಟು ಕೂತುಹಲ ಮೂಡಿಸಿದೆ.
ಬೆಂಗಳೂರು: ಅನಾರೋಗ್ಯ ಹಿನ್ನೆಲೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ (HD Devegowda) ರ ಮನೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಇಂದು ಭೇಟಿ ನೀಡಿ ಉಭಯ ಕುಶಲೋಪರಿ ವಿಚಾರಿಸಿದರು. ವಿಧಾನ ಮಂಡಲ ಕಲಾಪ ಮುಗಿದ ಬಳಿಕ ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಹೆಚ್. ಡಿ ದೇವೇಗೌಡರ ನಿವಾಸಕ್ಕೆ ತೆರಳಿ ಆರೋಗ್ಯ ವಿಚಾರಿಸಿದರು. ಒಂದುವರೆ ದಶಕದ ಬಳಿಕ ದೇವೆಗೌಡರ ನಿವಾಸಕ್ಕೆ ಸಿದ್ದರಾಮಯ್ಯ ಭೇಟಿ ನೀಡುತ್ತಿದ್ದು ಹಲವು ಕೂತೂಲಗಳಿಗೆ ಕಾರಣವಾಗಿದೆ. ಇತ್ತಿಚೆಗಷ್ಟೇ ದೇವೇಗೌಡರನ್ನ ಪದ್ಮನಾಭನಗರದ ಶಾಸಕ, ಕಂದಾಯ ಸಚಿವ ಆರ್. ಅಶೋಕ್ ಕೂಡ ಭೇಟಿಯಾಗಿದ್ದರು. ರಾಜಕೀಯವಾಗಿ ಸಿದ್ದರಾಮಯ್ಯ ಹಾಗೂ ದೇವೇಗೌಡ ವಿರೋಧಿಗಳಾಗಿದ್ದು ವೈಮನಸ್ಯ ಮರೆತು ದೇವೇಗೌಡರ ನಿವಾಸಕ್ಕೆ ಸಿದ್ದರಾಮಯ್ಯ ಭೇಟಿ ನೀಡಿದರು. ಇನ್ನೂ ಇದೇ ವೇಳೆ ಶಾಸಕರಾದ ಜಮೀರ್ ಅಹ್ಮದ್ ಖಾನ್, ಭೈರತಿ ಸುರೇಶ್, ಆರ್.ವಿ ದೇಶಪಾಂಡೆ ಸಾಥ್ ನೀಡಿದರು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.