Davanagere: ರಾಜನಹಳ್ಳಿ ಗುರುಪೀಠ ಮಹರ್ಷಿ ವಾಲ್ಮೀಕಿ ಜಾತ್ರಾ ಮಹೋತ್ಸವದಲ್ಲಿ ಭಾಗಿಯಾದ ಸಿದ್ದರಾಮಯ್ಯರಿಂದ ವಾಲ್ಮೀಕಿ ರತ್ನ ಪ್ರಶಸ್ತಿ ಪ್ರದಾನ

ಅರುಣ್​ ಕುಮಾರ್​ ಬೆಳ್ಳಿ

Updated on: Feb 09, 2023 | 5:49 PM

ಈ ಸಂದರ್ಭದಲ್ಲಿ ಸಿದ್ದರಾಮಯ್ಯನವರು ಸಾಹಿತಿ ಡಾ ರಂಗರಾಜ ವನದುರ್ಗೆ ಅವರಿಗೆ ವಾಲ್ಮೀಕಿ ರತ್ನ ಪ್ರಶಸ್ತಿ ನೀಡಿ ಗೌರವಿಸಿದ ಬಳಿಕ ವಾಲ್ಮೀಕಿ ವಿಜಯ ಸ್ಮರಣ ಸಂಚಿಕೆ ಬಿಡುಗಡೆ ಮಾಡಿದರು.

ದಾವಣಗೆರೆ: ಜಿಲ್ಲೆಯ ಹರಿಹರ ತಾಲ್ಲೂಕಿನ ರಾಜನಹಳ್ಳಿ (Rajanahalli) ವಾಲ್ಮೀಕಿ ಗುರುಪೀಠ 5 ನೇ ವರ್ಷದ ಮಹರ್ಷಿ ವಾಲ್ಮೀಕಿ (Maharshi Valmiki) ಜಾತ್ರಾ ಮಹೋತ್ಸವದಲ್ಲಿ ನಡೆದ ಲಿಂಗೈಕ್ಯ ಪುಣ್ಯಾನಂದ ಪುರಿ 15ನೇ ಪುಣ್ಯಾರಾಧನೆ, ಪ್ರಸನ್ನಾನಂದ ಶ್ರೀಗಳ 16ನೇ ವಾರ್ಷಿಕ ಪಟ್ಟಾಧಿಕಾರ ಮಹೋತ್ಸವ ಹಾಗೂ ನೂತನ ವಾಲ್ಮೀಕಿ ರಥ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಗುರುವಾರ ಭಾಗವಹಿಸಿದರು. ಈ ಸಂದರ್ಭದಲ್ಲಿ ಅವರು ಸಾಹಿತಿ ಡಾ ರಂಗರಾಜ ವನದುರ್ಗೆ (Dr Rangaraj Vanadurge) ಅವರಿಗೆ ವಾಲ್ಮೀಕಿ ರತ್ನ ಪ್ರಶಸ್ತಿ ನೀಡಿ ಗೌರವಿಸಿದ ಬಳಿಕ ವಾಲ್ಮೀಕಿ ವಿಜಯ ಸ್ಮರಣ ಸಂಚಿಕೆ ಬಿಡುಗಡೆ ಮಾಡಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Feb 09, 2023 05:49 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.