ಫೆಬ್ರವರಿ 8 ರಿಂದ ಗೋವಾದಲ್ಲಿ ಚುನಾವಣಾ ಪ್ರಚಾರ ಮಾಡಲಿದ್ದಾರೆ ಮಾಜಿ ಸಿಎಂ ಸಿದ್ದರಾಮಯ್ಯ
ಫೆಬ್ರವರಿ 7 ರಂದು ಬಳ್ಳಾರಿಯಲ್ಲಿ ಭೀಮಾ ನಾಯ್ಕ್ ಪುತ್ರಿ ವಿವಾಹ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದು, ಬಳಿಕ ಗೋವಾದ ವಿಧಾನಸಭಾ ಚುನಾವಣೆಯ ಅಂಗವಾಗಿ ಅಲ್ಲಿಗೆ ಪ್ರಚಾರಕ್ಕೆ ತೆರಳಲಿದ್ದಾರೆ.
ಮೈಸೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಸದ್ಯ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಕಬಿನಿ ರೆಸಾರ್ಟ್ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಇದಾದ ಮೇಲೆ ಮಾಜಿ ಸಿಎಂ ಸಿದ್ದರಾಮಯ್ಯ(Siddaramaiah) ಗೋವಾದಲ್ಲಿ ಕಾಂಗ್ರೆಸ್(Congress) ಪರ ಚುನಾವಣಾ ಪ್ರಚಾರ ಕೈಗೊಳ್ಳಲಿದ್ದಾರೆ. ಫೆಬ್ರವರಿ 8, 9ರಂದು ಗೋವಾದಲ್ಲಿ ಸಿದ್ದರಾಮಯ್ಯ ಪ್ರಚಾರ ಮಾಡಲಿದ್ದಾರೆ. ಗೋವಾದಲ್ಲಿ(Goa) ಕನ್ನಡಿಗರು ಹೆಚ್ಚಿರುವ ಕಡೆ ಸಿದ್ದರಾಮಯ್ಯ ಪ್ರಚಾರಕ್ಕಿಳಿಯಲಿದ್ದಾರೆ. ಫೆಬ್ರವರಿ 7 ರಂದು ಬಳ್ಳಾರಿಯಲ್ಲಿ ಭೀಮಾ ನಾಯ್ಕ್ ಪುತ್ರಿ ವಿವಾಹ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದು, ಬಳಿಕ ಗೋವಾದ ವಿಧಾನಸಭಾ ಚುನಾವಣೆಯ ಅಂಗವಾಗಿ ಅಲ್ಲಿಗೆ ಪ್ರಚಾರಕ್ಕೆ ತೆರಳಲಿದ್ದಾರೆ.
ಇದನ್ನೂ ಓದಿ:
ಕರ್ನಾಟಕಕ್ಕೆ ಯಾವುದೇ ಹೊಸ ಯೋಜನೆ ಘೋಷಿಸಿಲ್ಲ, ಇದೊಂದು ನಿರಾಶಾದಾಯಕ ಬಜೆಟ್; ಸಿದ್ದರಾಮಯ್ಯ ಟೀಕೆ
Latest Videos