ಡಿಕೆಶಿಗೆ ಮೊದಲು ಎಂಎಲ್ಎ ಟಿಕೆಟ್ ಕೊಡಿಸಿದ್ದೇ ನಾನು; ವೀರಪ್ಪ ಮೊಯ್ಲಿ
ಡಿಕೆ ಶಿವಕುಮಾರ್ ಗೆ ಪ್ರಥಮ ಬಾರಿ ಎಂಎಲ್ಎ ಟಿಕೆಟ್ ಕೊಡಿಸಿದವನೇ ನಾನು. ಇವತ್ತು ಯಶಸ್ವಿ ನಾಯಕರಾಗಿ ಅವರು ಕರ್ನಾಟಕದಲ್ಲಿ ಮೂಡಿ ಬಂದಿದ್ದಾರೆ. ಅವರು ಸದ್ಯದಲ್ಲೇ ಮುಖ್ಯಮಂತ್ರಿ ಆಗಬೇಕು. ಕಾರ್ಕಳ ಗೊಮ್ಮಟೇಶ್ವರನ ಪುಣ್ಯಭೂಮಿ. ಡಿಕೆಶಿ ಗೊಮ್ಮಟೇಶ್ವರನ ತರ ಬೆಳೆಯಲಿ. ಕೆಪಿಸಿಸಿ ಅಧ್ಯಕ್ಷರಾಗಿ ಪಕ್ಷ ಸಂಕಷ್ಟದಲ್ಲಿರುವಾಗ ಸಂಚಲನ ಮೂಡಿಸಿದ್ದಾರೆ. ರಾಷ್ಟ್ರದ ಎಲ್ಲಾ ರಾಜ್ಯಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಹೋರಾಟ ಮಾಡಿದ ಧೀಮಂತ ನಾಯಕ ಡಿಕೆಶಿ. ಕಾಂಗ್ರೆಸ್ ಪಕ್ಷಕ್ಕೆ ಒಳ್ಳೆಯ ನಾಯಕತ್ವ ಕೊಟ್ಟಿದ್ದೀರಿ, ಸಂಘಟನೆ ಮಾಡಿದ್ದೀರಿ. ನೀವು ಮುಖ್ಯಮಂತ್ರಿಯಾಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ವೀರಪ್ಪ ಮೊಯ್ಲಿ ಹೇಳಿದ್ದಾರೆ.
ಕಾರ್ಕಳ (ಮಾರ್ಚ್ 2): ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮೊದಲ ಬಾರಿ ಎಂಎಲ್ಎ ಟಿಕೆಟ್ ಕೊಡಿಸಿದವನೇ ನಾನು. ಇವತ್ತು ಯಶಸ್ವಿ ನಾಯಕರಾಗಿ ಡಿ.ಕೆ ಶಿವಕುಮಾರ್ ಬೆಳೆದಿದ್ದಾರೆ. ಡಿ.ಕೆ.ಶಿವಕುಮಾರ್ ಸದ್ಯದಲ್ಲೇ ಮುಖ್ಯಮಂತ್ರಿ ಆಗಬೇಕು. ಡಿ.ಕೆ.ಶಿವಕುಮಾರ್ ಅವರು ಗೊಮ್ಮಟೇಶ್ವರನಂತೆ ಎತ್ತರಕ್ಕೆ ಬೆಳೆಯಲಿ. ಕಾರ್ಕಳ ಗೊಮ್ಮಟೇಶ್ವರನ ಪುಣ್ಯಭೂಮಿ. ಕೆಪಿಸಿಸಿ ಅಧ್ಯಕ್ಷರಾಗಿ ಪಕ್ಷ ಸಂಕಷ್ಟದಲ್ಲಿರುವಾಗ ಸಂಚಲನ ಮೂಡಿಸಿದ್ದಾರೆ. ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಡಾ.ಎಂ ವೀರಪ್ಪ ಮೊಯ್ಲಿ ಕಾರ್ಕಳದಲ್ಲಿ ಸ್ಪೋಟಕ ಹೇಳಿಕೆ ನೀಡಿದ್ದಾರೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ