ಮಾಜಿ ಕಾರ್ಪೊರೇಟರ್ ನಜೀಮಾ ಪತಿ ಹತ್ಯೆ, ಆಸ್ಪತ್ರೆಗೆ ಭೇಟಿ ನೀಡಿದ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್

Edited By:

Updated on: Jul 14, 2022 | 11:38 AM

ಅವರ ದೇಹದ ಮರಣೋತ್ತರ ಪರೀಕ್ಷೆ ನಡೆಯುತ್ತಿದ್ದಾಗ ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಆಸ್ಪತ್ರೆಗೆ ಭೇಟಿ ನೀಡಿದರು. ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ದಾಯಾದಿಗಳಿಂದ ಅಯ್ಯುಬ್ ಖಾನ್ ಕೊಲೆ ನಡೆದಿದೆ ಎಂದು ಹೇಳಲಾಗುತ್ತಿದೆ.

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) 139ನೇ ವಾರ್ಡ್ನ ಮಾಜಿ ಕಾರ್ಪೋರೇಟರ್ ನಜೀಮಾ (Najima) ಅವರ ಪತಿ ಅಯ್ಯುಬ್ ಖಾನ್ (Ayub Khan) ಕಳೆದರಾತ್ರಿ ಸಂಬಂಧಿಕನೊಬ್ಬನಿಂದ ಇರಿತಕ್ಕೊಳಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಸೇರಿಸಲಾಗಿದ್ದರೂ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದರು. ಅವರ ದೇಹದ ಮರಣೋತ್ತರ ಪರೀಕ್ಷೆ ನಡೆಯುತ್ತಿದ್ದಾಗ ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಆಸ್ಪತ್ರೆಗೆ ಭೇಟಿ ನೀಡಿದರು. ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ದಾಯಾದಿಗಳಿಂದ ಅಯ್ಯುಬ್ ಖಾನ್ ಕೊಲೆ ನಡೆದಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ:  Shocking Video: ಫೋಟೋ ಆಸೆಯಿಂದ ಸಮುದ್ರದಲ್ಲಿ ಕೊಚ್ಚಿ ಹೋದ ಕುಟುಂಬ; ಶಾಕಿಂಗ್ ವಿಡಿಯೋ ವೈರಲ್