ಬಿಜೆಪಿ ನಾಯಕ ಬಿ ಶ್ರೀರಾಮುಲು ಒಂದೇದಿನ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯರನ್ನು ಭೇಟಿಯಾಗಿದ್ದು ಯಾಕೆ ಗೊತ್ತಾ?

ಅರುಣ್​ ಕುಮಾರ್​ ಬೆಳ್ಳಿ

Updated on: Nov 20, 2023 | 12:42 PM

ಬಂದು ಭೇಟಿಯಾದವರೆಲ್ಲ ಕ್ಷೇತ್ರದ ಕೆಲಸ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಚರ್ಚೆ ಮಾಡಲು ಇಲ್ಲವೇ ಅನುದಾನ ಬಿಡುಗಡೆ ಮಾಡುವಂತೆ ಕೇಳಲು ಬಂದಿದ್ದಾಗಿ ಹೇಳುತ್ತಾರೆ. ಆದರೆ ಮಾಜಿ ಮಂತ್ರಿ ಶ್ರೀರಾಮುಲು ಅವರು ತಮ್ಮ ಮಗಳ ಅಮಂತ್ರಣ ಪತ್ರಿಕೆಯನ್ನು ನೀಡಲು ಬಂದಿದ್ದರಂತೆ.

ಬೆಂಗಳೂರು: ಇಂದು ಬೆಳಗ್ಗೆ ನಡೆದ ಆಶ್ಚರ್ಯಕರ ಬೆಳವಣಿಗೆಯೊಂದರಲ್ಲಿ ಮಾಜಿ ಸಚಿವ ಮತ್ತು ಬಿಜೆಪಿ ಶಾಸಕ ಬಿ ಶ್ರೀರಾಮುಲು (B Sriramulu) ರಾಜ್ಯದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರನ್ನು ಭೇಟಿಯಾದರು. ಅಲ್ಲಿಗೆ ಹೋಗುವ ಮೊದಲು ಅವರು ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು (CM Siddaramaiah) ಸಹ ಭೇಟಿಯಾಗಿದ್ದರು. ಬಿಜೆಪಿ ಮತ್ತು ಜೆಡಿಎಸ್ ನಾಯಕರು ಶಿವಕುಮಾರ್ ಅವರನ್ನು ಭೇಟಿಯಾಗುವ ಪ್ರಕ್ರಿಯೆ ಕಳೆದ ಕೆಲ ತಿಂಗಳುಗಳಿಂದ ಜಾರಿಯಲ್ಲಿದೆ. ಈ ಸಂಪ್ರದಾಯವನ್ನು ಶುರುಮಾಡಿದ್ದು ಪ್ರಾಯಶಃ ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ ಇರಬಹುದು. ಬಂದು ಭೇಟಿಯಾದವರೆಲ್ಲ ಕ್ಷೇತ್ರದ ಕೆಲಸ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಚರ್ಚೆ ಮಾಡಲು ಇಲ್ಲವೇ ಅನುದಾನ ಬಿಡುಗಡೆ ಮಾಡುವಂತೆ ಕೇಳಲು ಬಂದಿದ್ದಾಗಿ ಹೇಳುತ್ತಾರೆ. ಆದರೆ ಮಾಜಿ ಸಚಿವ ಶ್ರೀರಾಮುಲು ಅವರು ತಮ್ಮ ಮಗಳ ಅಮಂತ್ರಣ ಪತ್ರಿಕೆಯನ್ನು ನೀಡಲು ಬಂದಿದ್ದರಂತೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Nov 20, 2023 12:03 PM
Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.