ತೆಲಂಗಾಣದ ಸಚಿವರಾಗಿ ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್ ಪ್ರಮಾಣವಚನ ಸ್ವೀಕಾರ
ರಾಜ್ಯಪಾಲ ಜಿಷ್ಣು ದೇವ್ ವರ್ಮಾ ಇಂದು ಬೆಳಿಗ್ಗೆ ರಾಜಭವನದಲ್ಲಿ ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್ಗೆ ಪ್ರಮಾಣವಚನ ಬೋಧಿಸಿದರು. ಅವರ ಸೇರ್ಪಡೆಯ ಮೂಲಕ ತೆಲಂಗಾಣದ ಸಂಪುಟದಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಮೊದಲ ಮುಸ್ಲಿಂ ಪ್ರಾತಿನಿಧ್ಯ ಸಿಕ್ಕಂತಾಗಿದೆ. ಮೊಹಮ್ಮದ್ ಅಜರುದ್ದೀನ್ ಶಾಸಕರೂ ಅಲ್ಲ, ವಿಧಾನ ಪರಿಷತ್ ಸದಸ್ಯ ಕೂಡ ಅಲ್ಲ. ಯಾವುದೇ ಸರ್ಕಾರದಲ್ಲಿ ಸಚಿವರಾಗಲು ಈ ಎರಡು ಸ್ಥಾನಗಳಲ್ಲಿ ಒಂದು ಅವಶ್ಯಕ.
ಹೈದರಾಬಾದ್, ಅಕ್ಟೋಬರ್ 31: ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಮೊಹಮ್ಮದ್ ಅಜರುದ್ದೀನ್ (Mohammad Azharuddin) ಇಂದು ತೆಲಂಗಾಣ ಸಚಿವ ಸಂಪುಟದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ಜಿಷ್ಣು ದೇವ್ ವರ್ಮಾ ಇಂದು ಬೆಳಿಗ್ಗೆ ರಾಜಭವನದಲ್ಲಿ ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್ಗೆ ಪ್ರಮಾಣವಚನ ಬೋಧಿಸಿದರು. ಅವರ ಸೇರ್ಪಡೆಯ ಮೂಲಕ ತೆಲಂಗಾಣದ ಸಂಪುಟದಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಮೊದಲ ಮುಸ್ಲಿಂ ಪ್ರಾತಿನಿಧ್ಯ ಸಿಕ್ಕಂತಾಗಿದೆ.
ಅಜರುದ್ದೀನ್ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ಬಗ್ಗೆ ಬಿಜೆಪಿ ತೀವ್ರ ಟೀಕೆ ಮಾಡಿತ್ತು. ಅಂದಹಾಗೆ, ಮೊಹಮ್ಮದ್ ಅಜರುದ್ದೀನ್ ಶಾಸಕರೂ ಅಲ್ಲ, ವಿಧಾನ ಪರಿಷತ್ ಸದಸ್ಯ ಕೂಡ ಅಲ್ಲ. ಯಾವುದೇ ಸರ್ಕಾರದಲ್ಲಿ ಸಚಿವರಾಗಲು ಈ ಎರಡು ಸ್ಥಾನಗಳಲ್ಲಿ ಒಂದು ಅವಶ್ಯಕ. ಅವರನ್ನು ಈಗಾಗಲೇ ರಾಜ್ಯಪಾಲರ ಕೋಟಾದಡಿಯಲ್ಲಿ ವಿಧಾನ ಪರಿಷತ್ತಿಗೆ ನಾಮನಿರ್ದೇಶನ ಮಾಡಲಾಗಿದೆ. ಆದರೆ ರಾಜ್ಯಪಾಲರು ಇನ್ನೂ ಆ ಪ್ರಸ್ತಾವನೆಗೆ ಸಹಿ ಹಾಕಿಲ್ಲ. ಹೀಗಿರುವಾಗಲೇ ಅವರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಅವರು ತಮ್ಮ ಸಚಿವ ಸ್ಥಾನವನ್ನು ಉಳಿಸಿಕೊಳ್ಳಲು ಮುಂದಿನ 6 ತಿಂಗಳೊಳಗೆ ಎಂಎಲ್ಸಿ ಆಗಲೇಬೇಕು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

