‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ

Edited By:

Updated on: Aug 20, 2026 | 1:24 PM

ಹಿಂಡಲಗಾ ಜೈಲಿನ ಅಧಿಕಾರಿಗಳು ವೇಶ್ಯಾವಾಟಿಕೆ ಮತ್ತು ಅಕ್ರಮ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ ಎಂದು ಮಾಜಿ ಕೈದಿ ಸುರೇಶ್ ಅಲಿಯಾಸ್ ಸಾಯಿ ಕುಮಾರ್ ಗಂಭೀರ ಆರೋಪ ಮಾಡಿದ್ದಾರೆ. ಹಣ ಪಡೆದು ಮೊಬೈಲ್, ಗಾಂಜಾ, ಸಿಮ್, ಮದ್ಯ ಹಾಗೂ ಐಷಾರಾಮಿ ಸೌಲಭ್ಯಗಳನ್ನು ನೀಡಲಾಗುತ್ತದೆ ಎಂದಿರುವ ಕೈದಿ, ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಕ್ಷ್ಯಗಳನ್ನು ತನ್ನ ಬಳಿ ಇರುವುದಾಗಿ ಹೇಳಿಕೊಂಡಿದ್ದಾನೆ.

ಬೆಳಗಾವಿ, ಆಗಸ್ಟ್ 20: ಬೆಳಗಾವಿಯ ಹಿಂಡಲಗಾ ಜೈಲಿನ ಅಧಿಕಾರಿಗಳ ವಿರುದ್ಧ ಮಾಜಿ ಕೈದಿಯೊಬ್ಬ ಅತ್ಯಂತ ಗಂಭೀರ ಆರೋಪಗಳನ್ನು ಮಾಡಿದ್ದಾನೆ. ತುಮಕೂರಿನ ಸುರೇಶ್ ಅಲಿಯಾಸ್ ಸಾಯಿ ಕುಮಾರ್ ಎಂಬಾತ, ಜೈಲಿನೊಳಗೆ ಅಧಿಕಾರಿಗಳೇ ವೇಶ್ಯಾವಾಟಿಕೆ, ಮೊಬೈಲ್, ಗಾಂಜಾ ಮತ್ತು ಮದ್ಯದ ಅಕ್ರಮ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ ಎಂದು ವಿಡಿಯೋ ಮೂಲಕ ಹೇಳಿಕೆ ನೀಡಿದ್ದಾನೆ. ಹಣ ನೀಡಿದರೆ ಜೈಲಿನೊಳಗೆ ಐಷಾರಾಮಿ ಸೌಲಭ್ಯಗಳನ್ನು ಸಹ ಒದಗಿಸಲಾಗುತ್ತದೆ. ಈ ಅಕ್ರಮ ಚಟುವಟಿಕೆಗಳಿಗೆ ಸಂಬಂಧಿಸಿದ ವಿಡಿಯೋ ಸಾಕ್ಷ್ಯಗಳು ತನ್ನ ಬಳಿ ಇದೆ ಎಂದು ಸುರೇಶ್ ಅಲಿಯಾಸ್ ಸಾಯಿ ಕುಮಾರ್ ಹೇಳಿದ್ದಾನೆ.

ಜೈಲಿನೊಳಗೆ ನಡೆಯುತ್ತಿದ್ದ ಗಾಂಜಾ ಮತ್ತು ಮೊಬೈಲ್ ಬಳಕೆಯ ಬಗ್ಗೆ ಸುರೇಶ್ ಈ ಹಿಂದೆ ಕೂಡ ಹಲವು ಬಾರಿ ಮಾಧ್ಯಮಗಳ ಮೂಲಕ ಧ್ವನಿ ಎತ್ತಿದ್ದ. ಜೈಲಿನೊಳಗೆ ಕೈದಿಗಳು ಪ್ರವೇಶಿಸುವಾಗ ಕಠಿಣ ತಪಾಸಣೆ ನಡೆಸಿದರೂ, ಮೊಬೈಲ್ ಫೋನ್‌ಗಳು ಹೇಗೆ ಲಭ್ಯವಾಗುತ್ತವೆ ಎಂಬುದು ಪ್ರಶ್ನಾರ್ಹ. ಜೈಲು ಅಧಿಕಾರಿಗಳೇ ಈ ಅಕ್ರಮ ಚಟುವಟಿಕೆಗಳಿಗೆ ಕುಮ್ಮಕ್ಕು ನೀಡುತ್ತಿದ್ದಾರೆ ಮತ್ತು ಹಣಕ್ಕಾಗಿ ಇಂತಹ ವ್ಯವಸ್ಥೆಗಳನ್ನು ಮಾಡಿಕೊಡುತ್ತಿದ್ದಾರೆ ಎಂದು ಆರೋಪಿಸಿದ್ದಾನೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More