Farooq Abdullah in Bengaluru: ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಭೇಟಿಯಾದ ಜಮ್ಮು ಮತ್ತು ಕಾಶ್ಮೀರ ಮಾಜಿ ಸಿಎಂ ಫರೂಕ್ ಅಬ್ದುಲ್ಲಾ

ಅರುಣ್​ ಕುಮಾರ್​ ಬೆಳ್ಳಿ

Updated on: Jun 07, 2023 | 6:01 PM

ಸಿದ್ದರಾಮಯ್ಯ ಮತ್ತು ಫರೂಕ್ ನಡುವೆ ಏನು ಮಾತುಕತೆ ನಡೆಯಿತು ಅಂತ ಗೊತ್ತಾಗಿಲ್ಲ.

ಬೆಂಗಳೂರು: ಜಮ್ಮು ಮತ್ತು ಕಾಶ್ಮೀರ ಮಾಜಿ ಮುಖ್ಯಮಂತ್ರಿ, ಲೋಕಸಭಾ ಸದಸ್ಯ, ಮತ್ತು ರಾಷ್ಟ್ರದ ಪ್ರಮುಖ ರಾಜಕಾರಣಿಗಳಲ್ಲಿ ಒಬ್ಬರೆನಿಸಿಕೊಂಡಿರುವ ಫರೂಕ್ ಅಬ್ದುಲ್ಲಾ (Farooq Abdullah) ಇಂದು ಬೆಂಗಳೂರಲ್ಲಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು (Siddaramaiah) ಅವರ ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿಮಾಡಿ ಮಾತುಕತೆ ನಡೆಸಿದರು. ಫರೂಕ್ ಭೇಟಿಯ ಸಂದರ್ಭದಲ್ಲಿ ಸಿದ್ದರಾಮಯ್ಯ ಜೊತೆ ಸಚಿವ ಬಿಜೆಡ್ ಜಮೀರ್ ಅಹ್ಮದ್ ಖಾನ್ (BZ Zameer Ahmed Khan), ಕರ್ನಾಟಕ ಒಲಂಪಿಕ್ ಸಂಸ್ಥೆಯ ಅಧ್ಯಕ್ಷ ಗೋವಿಂದರಾಜು ಮತ್ತು ಇನ್ನಿತರ ಗಣ್ಯರು ಹಾಜರಿದ್ದರು. ಸಿದ್ದರಾಮಯ್ಯ ಮತ್ತು ಫರೂಕ್ ನಡುವೆ ಏನು ಮಾತುಕತೆ ನಡೆಯಿತು ಅಂತ ಗೊತ್ತಾಗಿಲ್ಲ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.